ತೊಕ್ಕೊಟ್ಟಿನಲ್ಲಿ ಬೇಸಿಗೆ ಶಿಬಿರ ಸಮಾಪನ

New Project (27)
Published on

ಉಳ್ಳಾಲ: ತೊಕ್ಕೊಟ್ಟಿನ ರೀಚಲ್ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ 3 ದಿನಗಳ ಬೇಸಿಗೆ ರಜಾ ಉಚಿತ ಶಿಬಿರ ಭಾನುವಾರ ಸಮಾಪನಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸೇಂಟ್ ಸೆಬೆಸ್ಟಿಯನ್ ಆಂಗ್ಲ ಮಾಧ್ಯಮ ಶಾಲೆಯ ಪ್ರತೀಕ್ಷಾ ಡಿ.ಶೆಟ್ಟಿಗಾರ್, ದೀಕ್ಷಿತ್, ಬಜ್ಪೆ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಇಯಾನ್ ರೆನ್ಸಿಲ್ ಮಥಾಯಸ್, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂತ ಆಗ್ನೆಸ್ ಪಿಯು ಕಾಲೇಜಿನ ವಿಭಾ ವಿ.ಭಟ್ನಗರ, ಸಂತ ಸೆಬೆಸ್ಟಿಯನ್ ಪಿಯು ಕಾಲೇಜಿನ ಅಂಕಿತ ಅವರನ್ನು ಸನ್ಮಾನಿಸಲಾಯಿತು.

ರೀಚಲ್ ಚಾರಿಟೆಬಲ್ ಟ್ರಸ್ಟ್ ನಿರ್ದೇಶಕ ಸಿರಿಲ್ ರಾಬರ್ಟ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಸ್ವಚ್ಛ ಭಾರತ ಅಭಿಯಾನದ ರಾಯಭಾರಿ ಮಂಜುಳಾ ಜಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಚರ್ಚ್ ಧರ್ಮಗುರು ಫಾ.ಸಿಪ್ರಿಯನ್ ಪಿಂಟೊ, ಜಿಪಂ ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಉಳ್ಳಾಲ ದರ್ಗಾ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹಾ, ಪತ್ರಕರ್ತ ಶಶಿಧರ್ ಪೊಯ್ಯತ್ತಬೈಲ್, ಶಿಬಿರದ ಮೇಲ್ವಿಚಾರಕಿ ಮಲ್ಲಿಕಾ ಮೊದಲಾದವರು ಉಪಸ್ಥಿತರಿದ್ದರು. ಜೆಸಿಐ ಮಾಜಿ ಅಧ್ಯಕ್ಷ ಕಮಲಾಕ್ಷ ಶೆಟ್ಟಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಭವ್ಯ ವಂದಿಸಿದರು. ಸರಿತಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net