

ಕೋಟ: ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ಪಾಂಡೇಶ್ವರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ ಅಭಿಪ್ರಾಯಪಟ್ಟರು.
ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ, ಪಾಂಡೇಶ್ವರ ಗ್ರಾಪಂ ಹಾಗೂ ಸಾಸ್ತಾನ ಮಹಿಳಾ ಮಂಡಲ ಪಾಂಡೇಶ್ವರ, ಸ್ನೇಹ ಸಂಜೀವಿನಿ ಒಕ್ಕೂಟ ಪಾಂಡೇಶ್ವರ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನುದ್ದೇಶಿಸಿ ಮಾತನಾಡಿದರು.
ಸಾಸ್ತಾನ ಮಹಿಳಾ ಮಂಡಲ ಅಧ್ಯಕ್ಷೆ ಸುಮಿತ್ರಾ ಸುಧಾಕರ್, ಸಂಜೀವಿನಿ ಮುಖ್ಯ ಬರಹಗಾರ ಉಷಾ ಗಣೇಶ, ಸಂಪನ್ಮೂಲ ವ್ಯಕ್ತಿಯಾಗಿ ಜ್ಞಾನೇಶ್ವರಿ ಉಡುಪ ಉಪಸ್ಥಿತರಿದ್ದರು. ಮಕ್ಕಳು ಕವನ ರಚನೆ, ಚುಕ್ಕಿ ರಂಗೋಲಿ, ಉಲನ್ ಕ್ರಾಫ್ಟ್ ಮಾಡುವುದು ಸೇರಿದಂತೆ ವಿವಿಧ ರೀತಿಯ ಚಟುವಟಿಕೆ ಶಿಬಿರಾರ್ಥಿಗಳಿಗೆ ನೀಡಲಾಯಿತು. 52 ಮಕ್ಕಳು ಶಿಬಿರದಲ್ಲಿ ಭಾಗಿಯಾದರು.
ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ನಿರೂಪಿಸಿದರು. ಪಂಚಾಯಿತಿ ಕಾರ್ಯದರ್ಶಿ ವಿಜಯ ಭಂಡಾರಿ ವಂದಿಸಿದರು.