ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಬೇಸಿಗೆ ಶಿಬಿರ

summer camp
Published on

ಕಾರವಾರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲಾಗಿದ್ದು, ಹದಿನೈದು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರದಲ್ಲಿ ಓದುವ, ಬರೆಯುವ, ಅಂಕಿ ಸಂಖ್ಯೆ ವಿಜ್ಞಾನ ವಿಷÀಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಪರಿಸರ ಕಾಳಜಿ, ಸಾಮಾಜಿಕ ಕಾಳಜಿ ಬೆಳೆಸುವುದು ಮತ್ತು ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಯುವಂತೆ ಮಾಡುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಸಹ ಈ ಬೇಸಿಗೆ ಶಿಬಿರದ ಆಶಯವಾಗಿರುತ್ತದೆ. ಈ ಬೇಸಿಗೆ ಶಿಬಿರದಲ್ಲಿ ಮಕ್ಕಳಲ್ಲಿ ಸೃಜನಾತ್ಮಕತೆಗೆ ಸಹಾಯಕವಾಗಿ ಮಕ್ಕಳ ಪುಸ್ತಕ, ದಿನಪತ್ರಿಕೆ, ನಿಯತಕಾಲಿಕೆಗಳನ್ನು ಓದುವುದು ಚಿತ್ರ ಓದುವಿಕೆ (ಕಾರ್ಡ್) ಕಥೆ ಕಟ್ಟುವಿಕೆ, ಗಟ್ಟಿ ಮಾಡುವುದು, ಭಾಷÀಣ ಮಾಡುವುದು ಸೇರಿದಂತೆ ಬರೆಯುವ ಹಾಗೂ ಅಭಿವ್ಯಕ್ತಿ ಸಾಮರ್ಥ್ಯ ಹೆಚ್ಚಿಸುವ ಚಟುವಟಿಕೆಗಳು, ಅಂಕಿ ಸಂಖ್ಯೆ ಮತ್ತು ವಿಜ್ಞಾನಕ್ಕೆ ಸಂಬAಧಿಸಿದAತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್‌ಗ್ರಾಮ್. ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣು ಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರೆ ಚಟುವಟಿಕೆಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ನಾಯಕತ್ವ, ನೈತಿಕತೆ, ಸಹಾನುಭೂತಿ, ಜವಾಬ್ದಾರಿ ನಿರ್ವಹಣೆ, ತಂಡ ನಿರ್ವಹಣೆ, ಸಾಮಾಜಿಕ ಹೊಂದಾಣಿಕೆ ಮತ್ತು ನಾಗರಿಕ ಪ್ರಜ್ಞೆ ವಿಷಯವಾಗಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದ್ದು. ಮತ್ತು ಮಕ್ಕಳ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು, ದೈನಂದಿನ ಬದುಕಿನಲ್ಲಿ ಕಾಣುವ ಚಟುವಟಿಕೆಗಳನ್ನು ಅರಿಯಲು, ಶೋಧನಾ ಪ್ರವೃತ್ತಿ ಪ್ರೋತ್ಸಾಹಿಸಲು ಮತ್ತು ಕಲಿತದ್ದನ್ನು ವರದಿ ಮಾಡಲು ಯೋಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಯೋಜನಾ ಚಟುವಟಿಕೆಗಳಲ್ಲಿ ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ಜಾತ್ರೆ. ಜನಪದ ಗೀತೆಗಳು/ಜನಪದ ಕಥೆ, ಕ್ರೀಡೆಗಳು, ಕಲೆಗಳು, ಸ್ಥಳೀಯ ಸಂಸ್ಥೆಗಳಿಗೆ(ಅAಚೆ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘ, ಬ್ಯಾಂಕ್, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ ಗ್ರಾಮ ಪಂಚಾಯತಿ, ಆಸ್ಪತ್ರೆ ಇತ್ಯಾದಿ) ಭೇಟಿ ಮಾಡಲು ಹಾಗೂ ಯೋಜನಾ ಕಾರ್ಯವನ್ನು ಕೈಗೊಳ್ಳಲು ಹತ್ತು ಮಕ್ಕಳ ತಂಡವನ್ನು ರಚಿಸಿಕೊಂಡು ಈ ಸಂಸ್ಥೆಗಳಿಗೆ ಭೇಟಿ ನೀಡಲಾಗುತ್ತಿದೆ.. ಈ ಬೇಸಿಗೆ ಶಿಬಿರದ ಅವಧಿಯು 15 ದಿನಗಳಾಗಿದ್ದು ಗ್ರಾಮ ಪಂಚಾಯತ್ ವ್ಯಾಪ್ತಿಯ 8 ರಿಂದ 13 ವರ್ಷದೊಳಗಿನ 40 ಮಕ್ಕಳು ಭಾಗವಹಿಸಬಹುದಾಗಿದ್ದು, ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದ ಸರ್ಕಾರಿ ಶಾಲೆ/ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಈ ಶಿಬಿರ ನಡೆಯಲಿದೆ. ಸ್ಥಳೀಯ ತಾಪಮಾನವನ್ನು ಆಧರಿಸಿ ಶಿಬಿರದ ಸಮಯವನ್ನು 3 ಗಂಟೆಗಳ ಅವಧಿಗೆ ನಿಗಧಿಪಡಿಸಲಾಗಿದೆ.

ಗ್ರಾಮೀಣ ಪ್ರದೇಶದ ಮಕ್ಕಳಿಗೆ, ಬೇಸಿಗೆ ರಜೆ ಸಮಯವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿ, ಅವರ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ 229 ಗ್ರಾಮ ಪಂಚಾಯತಿ ಮೂಲಕ 15 ದಿನಗಳ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಬೇಸಿಗೆ ಶಿಬಿರದ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸ, ಅಂಕಿ-ಸAಖ್ಯೆ ಮತ್ತು ವಿಜ್ಞಾನ ವಿಷಯಗಳು, ನೈತಿಕತೆ ಮತ್ತು ನಾಯಕತ್ವ ವಿಷಯಗಳು ಮತ್ತು ಕಾರ್ಯಯೋಜನೆಗಳನ್ನು ರೂಪಿಸುವ ಕೌಶಲ್ಯವನ್ನು ಅಭಿವೃದ್ಧಿಪಡಿಸಿ, ಗ್ರಾಮೀಣ ಪ್ರದೇಶದ ಮಕ್ಕಳನ್ನು ಸಮಾಜದ ಪ್ರಜ್ಞಾವಂತ ಪ್ರಜೆಗಳನ್ನಾಗಿ ಮಾಡುವ ಸದುದ್ದೇಶವನ್ನು ಹೊಂದಲಾಗಿದೆ: ಈಶ್ವರ ಕಾಂದೂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಜಿಲ್ಲೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net