ಬೇಸಿಗೆ ಬಂದಿದೆ : ಪ್ರಾಣಿ, ಪಕ್ಷಿಗಳಿಗೆ ಮನೆಯ ಮುಂದೆ ನೀರು ಇಡಿ

BIRDS
Published on

ಮೈಸೂರು: ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ, ಪಕ್ಷಿಗಳ ಜೀವ ಉಳಿಸಲು ಜನರು ಮುಂದಾಗಬೇಕು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಹೇಳಿದರು.

ಬೇಸಿಗೆ ಸಂದರ್ಭ ಪ್ರಾಣಿ, ಪಕ್ಷಿಗಳಿಗೆ ನೀರುಣಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿರುವ ‘ಮೂಕ ಸ್ಪಂದನ’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, ಬೇಸಿಗೆಯ ರಣಬಿಸಿಲಿನ ತಾಪಮಾನದ ತೀವ್ರತೆಯಿಂದಾ ಗಿ ಪ್ರಾಣಿ, ಪಕ್ಷಿ ಸಂಕುಲ ಬಳಲುತ್ತಿವೆ. ಕುಡಿಯುವ ನೀರು ಹಾಗೂ ಆಹಾರಕ್ಕಾಗಿ ಪರಿತಪಿಸುತ್ತಿವೆ. ಹಾಗಾಗಿ ಬೇಸಿಗೆ ಸಂದರ್ಭ ಮನೆಯ ಬಳಿಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀರು, ಆಹಾರ ಒದಗಿಸುವ ಕಾರ್ಯವನ್ನು ಜನರು ಮಾಡಬೇಕು ಎಂದು ಮನವಿ ಮಾಡಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಸುರೇಶ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿದ್ಯಾರಣ್ಯ ಟ್ರಸ್ಟ್ ಅಧ್ಯಕ್ಷ ರವಿಶಂಕರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net