ಮುತ್ತಪ್ಪ ರೈ ಸಹೋದರನ ವಿರುದ್ಧ ಸ್ಪೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲು

Karunakar Rai
Published on

ಮಂಗಳೂರು: ಪುತ್ತೂರಿನ ಪಟಾಕಿ ಗೊಡೌನ್‌ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಸಹೋದರ ಹಾಗೂ ಕಟ್ಟಡದ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 9ಬಿ ಅಡಿ ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ದರ್ಬೆಯ ಆರಾಧ್ಯ ಕಟ್ಟಡದ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್‌ನಲ್ಲಿ ಶೇಖರಿಸಿಟ್ಟ ಪಟಾಕಿ ನ.2 ಸಂಜೆ ಸ್ಪೋಟಗೊಂಡಿತ್ತು. ಪಟಾಕಿ ಸಿಡಿಯುವ ಶಬ್ದಕ್ಕೆ ದರ್ಬೆ ಸುತ್ತಮುತ್ತಲಿನ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ದರ್ಬೆಯಲ್ಲಿ ಪಟಾಕಿ ಮಾರುವವರಿಗೆ ಸೇರಿದ ಪಟಾಕಿ ಎನ್ನಲಾಗಿದೆ. ಆದರೆ ಕರುಣಾಕರ ರೈ ತನ್ನ ಮನೆಯ ಉಪಯೋಗಕ್ಕೆ ಇಟ್ಟ ಪಟಾಕಿ ಎಂದು ಸ್ಥಳೀಯವಾಗಿ ಹೇಳಿಕೆ ನೀಡಿದ್ದರು.

ಇದೇ ಹೇಳಿಕೆ ವರದಿ ಆಧರಿಸಿ ರಾಜ್ಯ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ಪೊಲೀಸರಿಗೆ ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ಸಹೋದರನ ವಿರುದ್ದ ಪುತ್ತೂರು ಪೊಲೀಸರು ಸ್ಪೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net