ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಶಾಶ್ವತ ನಾಮಫಲಕ ಅನಾವರಣ

sssssssssss
Published on



ಮಂಗಳೂರು : ನಗರದ ಅಂಬೇಡ್ಕರ್ ವೃತ್ತದ ಬಳಿ ಬ್ಯಾಂಕ್ ಆಫ್ ಬರೋಡಾದ ಮುಂಭಾಗದಲ್ಲಿ ಮಂಗಳೂರು ಸ್ಮಾರ್ಟ್
ಸಿಟಿ ವತಿಯಿಂದ ನಿರ್ಮಿಸಿದ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಶಾಶ್ವತ ನಾಮಫಲಕವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ಶಕಿಲಾ ಕಾವ, ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸದಾನಂದ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾದ
ವಲಯ ಮುಖ್ಯಸ್ಥೆ ಗಾಯತ್ರಿ ಆರ್, ಉಪ ಮಹಾಪ್ರಬಂಧಕ ರಮೇಶ್ ಕಾನಡೆ, ಮಂಗಳೂರು ವಲಯ ಪ್ರಬಂಧಕ ಎಂ.ವಿ.ಎಸ್.ಪ್ರಸಾದ್, ವಿಜಯ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ ಸುಧಾಕರ್ ಶೆಟ್ಟಿ, ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ
ಕಾರ್ಯಾಧ್ಯಕ್ಷ ದೇವಿಚರಣ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರಾಜ್‌ಗೋಪಾಲ್ ರೈ, ಕದ್ರಿ ನವನೀತ್ ಶೆಟ್ಟಿ, ವಿಜಯ ಬ್ಯಾಂಕ್ ವರ್ಕರ್ಸ್ ಮತ್ತು ಆಫೀಸರ್ಸ್ ಸಂಘಟನೆಯ ಮಾಜಿ ವಲಯ ಅಧ್ಯಕ್ಷ ಮೂಲ್ಕಿ ಕರುಣಾಕರ ಶೆಟ್ಟಿ, ಸೀತಾ ಚರಣ್ ಶೆಟ್ಟಿ, ಶ್ರೀಧರ್ ಶೆಟ್ಟಿ, ಉದಯ ಶೆಟ್ಟಿ, ಸ್ಮಾರ್ಟ್ ಸಿಟಿಯ ಮಹಾಪ್ರಬಂಧಕ ಅರುಣ್ ಪ್ರಭಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net