

ಹೆಬ್ರಿ: ಕನ್ನಡ ರಾಜ್ಯೋತ್ಸವದ ಆಚರಣೆ ಕನ್ನಡಿಗರನ್ನು ಒಂದುಗೂಡಿಸುವ ಹಾಗೂ ಕನ್ನಡ ನೆಲ ಜಲ ಭಾಷೆ ಸಂಸ್ಕೃತಿ ಆಚಾರ ವಿಚಾರಗಳ ಕುರಿತು ಅಭಿವಾನ ಹೆಚ್ಚಿಸುವ ಸುಂದರಯಾನ ಎಂದು ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಧಾಕರ್ ಕೆ.ಜಿ ಹೇಳಿದರು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಶ್ವೇಶ್ವರ ಎನ್.ಗಾವಂಕರ್, ಸಹಪ್ರಾಧ್ಯಾಪಕ ಡಾ.ಮಂಜುನಾಥ ಆಚಾರಿ ಉಪಸ್ಥಿತರಿದ್ದರು.