

ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ನೂತನ ಅಧ್ಯಕ್ಷರಾಗಿ ಹೆಬ್ಬಿಗೆ ಸುಂದರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ವೇಣುಗೋಪಾಲ್ ಮಾತನಾಡಿ, ಗ್ರಾಪಂಗಳಲ್ಲಿ ಅನುದಾನದ ಕೊರತೆ ಇದ್ದರೂ ಕೂಡಾ ನಿರ್ಗಮಿತ ಅಧ್ಯಕ್ಷ ಹಂಚಲಿ ರಾಘವೇಂದ್ರ ಅವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಸೇವಾಕಾರ್ಯ ನಿರ್ವಹಿಸಿದ್ದಾರೆ. ಸೈನಿಕರಿಗೆ ಗೌರವ ಸಮರ್ಪಣೆ, ವಿದ್ಯಾರ್ಥಿಗಳಿಗೆ ಕೃಷಿ ಅರಿವು, ಭತ್ತ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಜನಮಾನಸದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದಾರೆ. ಸರ್ಕಾರದ ಸೌಲಭ್ಯಗಳ ಕುರಿತು ಗ್ರಾಪಂ ವ್ಯಾಪ್ತಿಯಲ್ಲಿ ಮನೆ-ಮನೆಗೆ ತಲುಪಿಸುವ ಗುರುತರ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ ಎಂದರು.
ನೂತನ ಅಧ್ಯಕ್ಷ ಹೆಬ್ಬಿಗೆ ಸುಂದರೇಶ್ ಮಾತನಾಡಿ, ಮಾಜಿ ಅಧ್ಯಕ್ಷರ ಪರಿಕಲ್ಪನೆಯ ಯೋಜನೆಗಳನ್ನು ಮುಂದುವರಿಸಿ ಗ್ರಾಮದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದರು.
ಮಂಡಲದ ಪ್ರಧಾನ ಕಾರ್ಯದರ್ಶಿ ನೂತನ್‌ಕುಮಾರ್, ಎಸ್ಸಿ ಮೋರ್ಚಾ ವಕ್ತಾರ ಬಿ.ಶಿವಶಂಕರ್,ಡಿಸಿಸಿ ಬ್ಯಾಂಕ್ ನಿರ್ದೇಶಕ ಗೇರುಬೈಲು ಶಂಕರಪ್ಪ, ಗ್ರಾಪಂ ಉಪಾಧ್ಯಕ್ಷೆ ವಿನೋದ, ಅಡ್ಡಗದ್ದೆ ಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಡಿ.ಸುರೇಶ್ ಉಪಸ್ಥಿತರಿದ್ದರು.