ಭಾನುವಾರ ಹೋಟೆಲ್ ಬಂದ್ ಇಡಲು ನಿರ್ಧಾರ

0102
Published on

ಬೆಳಗಾವಿ: ಕರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮದ ಭಾಗವಾಗಿ ಮಾ. 22ರಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9ರ ವರೆಗೆ ಬೆಳಗಾವಿಯ ಎಲ್ಲ ಹೋಟೆಲ್ ಹಾಗೂ ಉಪಾಹಾರ ಗೃಹ ಬಂದ್ ಇಡಲು ನಿರ್ಧರಿಸಲಾಗಿದೆ.

ಶುಕ್ರವಾರ ಆಯೋಜಿಸಿದ್ದ ಬೆಳಗಾವಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಹಾಗೂ ಸದಸ್ಯರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನ ಮಂತ್ರಿ ಅವರ ಕರೆಯ ಮೇರೆಗೆ ಹಾಗೂ ದೇಶದ ಹಿತದೃಷ್ಟಿಯಿಂದ ಭಾನುವಾರ ಹೋಟೆಲ್ ಬಂದ್ ಇಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net