ಭಾನುವಾರ ಕೊಡವ ನ್ಯಾಷನಲ್ ಡೇ

Sunday is Kodava National Day
Published on

ಮಡಿಕೇರಿ:

ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ೩೩ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆ ಭಾನುವಾರ (ನ.೨೬) ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಹಕ್ಕೊತ್ತಾಯ ಮಂಡಿಸಲಾಗುವುದು ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ದಿನವನ್ನು ಆಚರಿಸಲಾಗುವುದು.

ಕೊಡವ ಬುಡಕಟ್ಟಿನ ವಿಸ್ತಾರವಾದ ಭೂಮಿ ಮತ್ತು ಬುಡಕಟ್ಟು ಜನಾಂಗವಾಗಿರುವ ಕೊಡವರ ಭದ್ರತೆಗಾಗಿ ಸಂವಿಧಾನದ ಆರ್ಟಿಕಲ್ ೨೪೪ ಆರ್/ಡಬ್ಲ್ಯೂ ೬ನೇ ಮತ್ತು ೮ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡುವುದು ಅನಿವಾರ್ಯವೆಂದು ಸಭೆಯಲ್ಲಿ ಪ್ರತಿಪಾದಿಸಲಾಗುವುದು ಎಂದು ನಾಚಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net