

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪುತ್ರ ಸುನಿಲ್ ಬೋಸ್ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2008ರಿಂದ ನಾನು ಸಕ್ರಿಯ ರಾಜಕಾರಣದಲ್ಲಿ ಇದ್ದೇನೆ, ಹಾಗಿಂದ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಇದರ ಆಧಾರದ ಮೇಲೆ ಲೋಕಸಭಾ ಟಿಕೆಟ್ ಕೇಳುತ್ತಿದ್ದೇನೆ. ಟಿಕೆಟ್ ನೀಡಿದರೆ ಸಂತೋಷದಿಂದ ಸ್ಪರ್ಧೆ ಮಾಡುತ್ತೇನೆ, ಇಲ್ಲವಾದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದರು.