ಹಾಕಿ ಶಿಬಿರಕ್ಕೆ ಸುನೀಲ್ ಭೇಟಿ

ಹಾಕಿ ಶಿಬಿರಕ್ಕೆ ಸುನೀಲ್ ಭೇಟಿ
Published on

ಸೋಮವಾರಪೇಟೆ: ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಟ್ಟಣದ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ನಡೆಯುತ್ತಿರುವ ಹಾಕಿ ಬೇಸಿಗೆ ಶಿಬಿರಕ್ಕೆ ಭಾನುವಾರ ಅಂತಾರಾಷ್ಟ್ರೀಯ ಹಾಕಿ ಪಟು ಎಸ್.ವಿ.ಸುನೀಲ್ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕ್ರೀಡೆಯನ್ನು ಪ್ರೀತಿಸಿ, ನಿರಂತರ ಅಭ್ಯಾಸ ಮಾಡಿದರೆ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಬಹುದು. ಇಲ್ಲಿನ ಮೈದಾನದಲ್ಲಿ ಆಟವಾಡಿದ ಸಾಕಷ್ಟು ಆಟಗಾರರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಎಂದು ಹೇಳಿದರು.

ಈ ಸಂದರ್ಭ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ.ಇ.ಮಹೇಶ್, ಗೌರವಾಧ್ಯಕ್ಷ ಎಚ್.ಎನ್.ಅಶೋಕ, ಖಜಾಂಚಿ ಕೆ.ಜೆ. ಗಿರೀಶ್, ಸಹಕಾರ್ಯದರ್ಶಿ ಮಹೇಶ್, ಸದಸ್ಯ ವಿನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net