ಹೆಗ್ಗಟ್ಟ ಗ್ರಾ.ಪಂಗೆ ಸುನಿತಾ ಸೋಮೇಶ್ ಅಧ್ಯಕ್ಷೆ

IMG_20250912_192000
Published on

ಗಂಡಸಿ: ಹೋಬಳಿಯ ಹೆಗ್ಗಟ್ಟ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸುನಿತಾ ಸೋಮೇಶ್ ಅವಿರೋಧವಾಗಿ ಆಯ್ಕೆಯಾದರು.

ಆಂತರಿಕ ಒಪ್ಪಂದದಂತೆ ಚಿಕ್ಕ ಗಂಡಸಿ ಮಂಜಪ್ಪ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 12 ಸದಸ್ಯರ ಬಲದ ಹೆಗ್ಗಟ್ಟ ಗ್ರಾಮ ಪಂಚಾಯಿತಿಗೆ ಶುಕ್ರವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಸುನಿತಾ ಸೋಮೇಶ್ ಹೊರತುಪಡಿಸಿ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಇಒ ಸತೀಶ್ ಅವರು ಸುನಿತಾ ಸೋಮೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಗ್ರಾ.ಪಂ ಮಾಜಿ ಅಧ್ಯಕ್ಷ ಯರಗನಾಳು ಮಲ್ಲೇಶ್, ಎಪಿಎಂಸಿ ಮಾಜಿ ಸದಸ್ಯ ರಾಮಚಂದ್ರು, ಲೋಕೇಶ್, ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು, ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net