ಕಂದಾಯ ಇಲಾಖೆ ವಸತಿ ಗೃಹಕ್ಕೆ ಬೆಂಕಿ

02sunti02
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: NightHDR; cct_value: 0; AI_Scene: (-1, -1); aec_lux: 78.0; hist255: 0.0; hist252~255: 0.0; hist0~15: 0.0;
Published on

ಸುಂಟಿಕೊಪ್ಪ: ನಾಡ ಕಚೇರಿಯ ಕಂದಾಯ ಇಲಾಖೆ ಅಧಿಕಾರಿಗಳ ವಸತಿ ಗೃಹ ಹಳೆಯ ಕಟ್ಟಡ ಆಕಸ್ಮಿಕ ಬೆಂಕಿಗೆ ಹಾನಿಯಾಗಿದೆ.ಕಳೆದ ಹಲವು ವರ್ಷಗಳಿಂದ ಪಾಳು ಬಿದ್ದಿದ್ದ ಈ ಕಟ್ಟಡದಲ್ಲಿ ಶುಕ್ರವಾರ ದಿಢೀರ್ ಬೆಂಕಿ ಕಾಣಿಸಿಕೊಂಡು ಪೂರ್ಣ ಪ್ರಮಾಣದಲ್ಲಿ ಆವರಿಸಿತು. ಸುತ್ತ ಮುತ್ತಲ್ಲಿನ ನಿವಾಸಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಗ್ರಾಮ ಪಂಚಾಯಿತಿ ಪಿಡಿಒ ವಿ.ಜಿ.ಲೋಕೇಶ್,ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಕೀಮ್,ಕಂದಾಯ ಪರಿವೀಕ್ಷಕ ಪ್ರಶಾಂತ್, ಪೊಲೀಸ್ ಉಪ ಠಾಣಾಧಿಕಾರಿ ತೀರ್ಥಕುಮಾರ್ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net