ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ 'ಸೂಪರ್ ಕರೊನಾ ವಾರಿಯರ್'; ನಾಳೆ ಪ್ರಶಸ್ತಿ ಪ್ರದಾನ..

bsy
Published on

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಸೂಪರ್ ಕರೊನಾ ವಾರಿಯರ್. ಅರ್ಥಾತ್, ಅವರನ್ನು ಸೂಪರ್ ಕರೊನಾ ವಾರಿಯರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನಾಳೆ ಪ್ರದಾನ ಮಾಡಲಾಗುವುದು.

ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ದಾವಣಗೆರೆಯ ನ್ಯಾಮತಿ ಪಟ್ಟಣದ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ನಡೆಯಲಿರುವ ಕರೊನಾ ವಾರಿಯರ್ಸ್​ಗೆ ಅಭಿನಂದನಾ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ನಾಲ್ಕು ಸಾವಿರಕ್ಕೂ ಹೆಚ್ಚು ವಾರಿಯರ್ಸ್​ಗೆ ಈ ಸಂದರ್ಭದಲ್ಲಿ ಗೌರವ ಸಮರ್ಪಣೆ ಮಾಡಲಾಗುವುದು. ಅಲ್ಲದೆ ಈ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ‌ ಬೈರತಿ ಬಸವರಾಜ್, ಸಂಸದ ಜಿ.ಎಂ. ಸಿದ್ದೇಶ್ವರ್ ಇತರರು ಭಾಗಿ ಆಗಲಿದ್ದಾರೆ. ರಾತ್ರಿ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮವೂ ಇರಲಿದೆ ರೇಣುಕಾಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net