ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಸಜ್ಜಿತ ಆಸ್ಪತ್ರೆಯ ಕೂಗು

Malti speciality hospital at rajyotsava program
Published on

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಇದೆ ಎಂಬ ಕೂಗು ಜಿಲ್ಲಾಡಳಿತ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಯೇ ಕೇಳಿ ಬಂತು.

ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣದ ನಂತರ ಅಯೋಜಿಸಿದ ಸಾಮೂಹಿಕ ನೃತ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯದ ನಡುವೆಯೇ ಬ್ಯಾನರ್ ಪ್ರದರ್ಶಿಸಿ ಗಮನ ಸೆಳೆದರು.

ಹಿಂದು ಹೈಸ್ಕೂಲ್ ನಿಂದ ಆಯೋಜಿಸಿದ್ದ ನೃತ್ಯದ ನಡುವೆ "ಉತ್ತರ‌ ಕನ್ನಡಕ್ಕೆ ಸುಸಜ್ಜಿತ ಆಸ್ಪತ್ರೆಯ ಅವಶ್ಯಕತೆ ಇದೆ ಎಂಬ ಬ್ಯಾನರ್ ಒಂದನ್ನು ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾಧಿಕಾರಿ, ಶಾಸಕರ ಎದುರು ಪ್ರದರ್ಶಿಸಿದರು‌.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net