ಪೂರಕ ಕನ್ನಡ ಪರೀಕ್ಷೆಗೆ 481 ವಿದ್ಯಾರ್ಥಿಗಳು ಗೈರು

300720 Raichur CET Exam
ರಾಯಚೂರಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು.
Published on

ಬೆಳಗಾವಿ: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಮಂಗಳವಾರ ಮಾತೃಭಾಷೆ ಕನ್ನಡ ವಿಷಯ ಪರೀಕ್ಷೆಗೆ ಜಿಲ್ಲೆಯಲ್ಲಿ 6,224 ವಿದ್ಯಾರ್ಥಿಗಳು ಹಾಜರಾಗಿದ್ದು, 481 ವಿದ್ಯಾರ್ಥಿಗಳು ಗೈರಾಗಿದ್ದರು. ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟು 6,705 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 6,224 ವಿದ್ಯಾರ್ಥಿಗಳು ಹಾಜರಾಗಿದ್ದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಿಂದ ನೋಂದಣಿಯಾಗಿದ್ದ 2,700 ವಿದ್ಯಾರ್ಥಿಗಳ ಪೈಕಿ 2,540 ವಿದ್ಯಾರ್ಥಿಗಳು ಹಾಜರಾಗಿದ್ದು 160 ಮಕ್ಕಳು ಗೈರಾಗಿದ್ದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ನೋಂದಣಿಯಾಗಿದ್ದ 4,005 ವಿದ್ಯಾರ್ಥಿಗಳ ಪೈಕಿ 3,684 ವಿದ್ಯಾರ್ಥಿಗಳು ಹಾಜರಾಗಿದ್ದು, 321 ಮಕ್ಕಳು ಗೈರಾಗಿದ್ದರು. 81 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಬೆಳಗಾವಿ ಡಿಡಿಪಿಐ ಡಾ. ಎ.ಪುಂಡಲೀಕ ಹಾಗೂ ಚಿಕ್ಕೋಡಿ ಡಿಡಿಪಿಐ ಗಜಾನನ ಮಣ್ಣಿಕೇರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net