

ರಾಯಚೂರು: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 12 ಗಂಟೆ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಸ್ಥಳೀಯ ಜೆಸ್ಕಾಂ ವಿಭಾಗೀಯ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜೆಸ್ಕಾಂ ಅೀಕ್ಷಕ ಇಂಜಿನಿಯರ್ ಚಂದ್ರಶೇಖರ ದೇಸಾಯಿಗೆ ಮನವಿ ಸಲ್ಲಿಸಿ, ಮುಂಗಾರು ಮಳೆ ವಿಲವಾಗಿ ರೈತರು ಬೆಳೆದ ಬೆಳೆಗಳು ಒಣಗುವ ಸ್ಥಿತಿಯಲ್ಲಿದ್ದು, ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡದ ಕಾರಣ ಬೆಳೆಗಳು ಹಾನಿಗೊಳಗಾಗುವ ಸ್ಥಿತಿಗೆ ಬಂದಿವೆ ಎಂದು ದೂರಿದರು.
ಹಿಂದೆ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್ ಪೂರೈಸಲಾಗುತ್ತಿತ್ತು. ಆದರೆ ಈಗ 3 ಗಂಟೆ ರಾತ್ರಿ ವೇಳೆ ವಿದ್ಯುತ್ ನೀಡಲಾಗುತ್ತಿದ್ದು, ರಾಯಚೂರು ತಾಲೂಕಿನಲ್ಲಿ ರಾತ್ರಿ ವೇಳೆ ಆರರಿಂದ ಏಳು ಗಂಟೆ ವಿದ್ಯುತ್ ಪೂರೈಸುತ್ತಿರುವುದರಿಂದ ರೈತರು ಬೆಳೆಗಳಿಗೆ ನೀರು ಹರಿಸಲು ಸಮಸ್ಯೆ ಎದುರಿಸುವಂತಾಗಿದೆ.
ಕಾರಣ ಹಗಲಿನಲ್ಲಿ ರೈತರ ಪಂಪ್‌ಸೆಟ್‌ಗೆ 12 ಗಂಟೆ ನಿರಂತರ ಮೂರು ೇಸ್ ವಿದ್ಯುತ್ ಪೂರೈಸುವ ಮೂಲಕ ಬೆಳೆಗಳು ಒಣಗುವುದನ್ನು ತಪ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಪದಾಕಾರಿಗಳಾದ ನರಸಿಂಹರಾವ್ ಕುಲಕರ್ಣಿ, ಅಕ್ಕಮ್ಮ ಗಿಲ್ಲೆಸುಗೂರು, ಮಜೀದ್, ಈರೇಶ ಕಡಗಂದೊಡ್ಡಿ, ಜಿ.ರಮೇಶ, ಜಿ.ಹುಲಿಗೆಪ್ಪ, ನರಸರೆಡ್ಡಿ, ತಿಮ್ಮಪ್ಪ, ದೇವಪ್ಪ, ಜೆ.ಎಂ.ಶ್ರೀಧರ, ನರಸಪ್ಪ ಯಾದವ, ಖಾಸೀಂ ಪಾಲ್ಗೊಂಡಿದ್ದರು.