ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ

sri bjp
ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಧನಂಜಯ ಸರ್ಜಿ ಸಹೋದರ ಹರ್ಷ ಅವರು ವಿಧಾನಪರಿಷತ್ ಅಭ್ಯರ್ಥಿಗಳ ಪರ ಮತಯಾಚಿಸಿದರು. ಶಶಿಧರ್, ಪ್ರವೀಣ್ ಪೂಜಾರಿ, ಶಿವಶಂಕರ್, ಚಂದ್ರಶೇಖರ್ ಇದ್ದರು.
Published on

ಶೃಂಗೇರಿ: ವಿಧಾನ ಪರಿಷತ್ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಸಹೋದರ ಹರ್ಷ ಮನವಿ ಮಾಡಿದರು.

ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಅಭ್ಯರ್ಥಿಗಳ ಪರ ಮತಯಾಚಿಸಿ ಮಾತನಾಡಿದರು. ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಬೋಜೇಗೌಡ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. ಎರಡೂ ಕ್ಷೇತ್ರಗಳ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಅಭ್ಯರ್ಥಿಗಳು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದರು. ಬಿಜೆಪಿ ಮುಖಂಡರಾದ ಬಿ.ಶಿವಶಂಕರ್, ಪ್ರವೀಣ್ ಪೂಜಾರಿ, ಎಚ್.ಎಸ್.ಸುಬ್ರಹ್ಮಣ್ಯ, ಮುಖ್ಯಶಿಕ್ಷಕ ಶಶಿಧರ್ ಹಾಗೂ ಸಹಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net