ಮೋದಿ ಮತ್ತೆ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ

Support BJP to make Modi PM again
ಬಿ.ಎಸ್. ಸೋಮಶೇಖರ
Published on

ಗುಳೇದಗುಡ್ಡ: ಭವ್ಯ ಭಾರತದ ಸಂರಕ್ಷಣೆ ಹಾಗೂ ಉತ್ತರೋತ್ತರ ಅಭಿವೃದ್ಧಿಗಾಗಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ ಅನಿವಾರ್ಯ. ಅದಕ್ಕಾಗಿ ನೇಕಾರರು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಗೌಡರ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಂಚಾಲಕ, ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಅಧ್ಯಕ್ಷ ಬಿ.ಎಸ್. ಸೋಮಶೇಖರ ಮನವಿ ಮಾಡಿದರು.

ಈ ವಿಷಯವಾಗಿ ಪತ್ರಿಕೆ ಪ್ರಕಟಣೆ ನೀಡಿರುವ ಅವರು, ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಕಪ್ಪುಚುಕ್ಕೆಯಿಲ್ಲದೆ ಭಾರತೀಯತೆಯನ್ನು ಎತ್ತಿ ಹಿಡಿದಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದು ಸಾಮಾನ್ಯ ಕೆಲಸವಲ್ಲ. ನೇಕಾರ ವೃತ್ತಿ ಗುರುತಿಸಿ 2015ರ ಆ. 7ನ್ನು ಕೈ ಮಗ್ಗ ದಿನಾಚರಣೆ ಘೋಷಣೆ ಮಾಡಿದ್ದಾರೆ. ನೇಕಾರ ಸಮುದಾಯದ ಕೆ. ನಾರಾಯಣ್ ಅವರು ರಾಜ್ಯಸಭಾ ಸದಸ್ಯರಾಗಿ, ವಿ. ಕೇಶವಪ್ರಸಾದ್ ಅವರಿಗೆ ಪಕ್ಷದಲ್ಲಿ ಅವಕಾಶ ಕಲ್ಪಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ನೇಮಕಮಾಡಿ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದ್ದಾರೆ ಎಂದರು.

ಬಿ.ಎಸ್.ಯಡಿಯೂರಪ್ಪ ತಮ್ಮ ಆಡಳಿತ ಅವಧಿಯಲ್ಲಿ ನೇಕಾರ ಸಾಲಮನ್ನಾ, ನೇಕಾರ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದು, ನೇಕಾರರ ಪಿತಾಮಹ ಶ್ರೀ ದೇವರ ದಾಸಿಮಯ್ಯ ಜಯಂತಿ ಘೋಷಣೆ ಮಾಡಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಅವಧಿಯಲ್ಲಿ ನೇಕಾರ ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಟೆಕ್ಸ್‌ಟೈಲ್ಸ್ ಪಾರ್ಕ್‌ಗಳನ್ನು ತೆರೆಯಲು ಆದೇಶಮಾಡಿದ್ದು, ಬಿಜೆಪಿ ನೇಕಾರ ಜನಾಂಗದ ಪರವಾಗಿ ಯಾವಾಗಲೂ ನಿಂತಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರಿಗೆ ನಿಮ್ಮ ಅಮೂಲ್ಯ ಮತವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net