ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ

KPCC Women cell state president Pushpa amaranath press meet koppal
Published on

ಮೈಸೂರು: ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮನವಿ ಮಾಡಿದರು.
ಎಲ್ಲ ಮತದಾರರು ಪಕ್ಷಾತೀತ, ಜಾತ್ಯತೀತವಾಗಿ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡುವಂತೆ ಕೋರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಹೊಸ ಪಿಂಚಣಿ ಪದ್ಧತಿ ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಲಿದ್ದೇವೆ. ಶಿಕ್ಷಕರು ಮತ್ತು ಪದವೀಧರರ ಸಮಸ್ಯೆ ಇತ್ಯರ್ಥಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕುಮಾರ್‌ನಾಯ್ಕ ವರದಿ ಅನುಷ್ಠಾನ ಮಾಡಬೇಕಿದೆ. ಶಿಕ್ಷಕರ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ಶಿಕ್ಷಕರು, ಪದವೀಧರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net