ಸ್ವಾಭಿಮಾನ ಉಳಿವಿಗಾಗಿ ಜೆಡಿಎಸ್ ಬೆಂಬಲಿಸಿ

oppo_2
ಮದ್ದೂರು ತಾಲೂಕಿನ ಘಟ್ಟಹಳ್ಳಿ ಗ್ರಾಮಗಳಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಮಾಜಿ ಶಾಸಕ ಸುರೇಶ್‌ಗೌಡ ಮತಯಾಚಿಸಿದರು. ಕೆ.ಟಿ.ಶ್ರೀಕಂಠೇಗೌಡ, ಶಿವಲಿಂಗಯ್ಯ, ಕೌಡ್ಲೆ ಚೇತನ್ ಹೊಂಬಾಳೆ, ಕೆ.ಸಿ.ರಾಮು, ಪುಟ್ಟರಾಜು, ಚನ್ನಪ್ಪ, ಕೆ.ಎಸ್.ಶಿವರಾಜು ಇದ್ದರು.
Published on

ಮದ್ದೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಸುರೇಶ್‌ಗೌಡ ಕರೆ ನೀಡಿದರು.

ತಾಲೂಕಿನ ಘಟ್ಟಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಗುರುವಾರ ರಾತ್ರಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಪರ ಮತಯಾಚಿಸಿ ಮಾತನಾಡಿದರು. ಈ ಚುನಾವಣೆ ಜೆಡಿಎಸ್‌ನ ಅಳಿವು ಉಳಿವಿನ ಪ್ರಶ್ನೆ. ಜತೆಗೆ ಮಂಡ್ಯದ ಅಸ್ಮಿತೆ ಪ್ರಶ್ನೆಯಾಗಿದೆ. ಹಾಗಾಗಿ ಜಿಲ್ಲೆಯ ಸ್ವಾಭಿಮಾನದ ಉಳಿವಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವು ಅನಿವಾರ್ಯ ಎಂದರು.

ದಲಿತ, ಹಿಂದುಳಿದ ಹಾಗೂ ಮುಸ್ಲಿಂ ಮತದಾರರನ್ನು ಭೇಟಿ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಾಧನೆಗಳ ಬಗ್ಗೆ ತಿಳಿಸಿ ಹೆಚ್ಚು ಮತಗಳು ಬರುವಂತೆ ಮಾಡಬೇಕು ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಗ್ರಾಪಂ ಮಾಜಿ ಸದಸ್ಯ ಶಿವಲಿಂಗಯ್ಯ, ಮುಖಂಡರಾದ ಕೌಡ್ಲೆ ಚೇತನ್ ಹೊಂಬಾಳೆ, ಕೆ.ಸಿ.ರಾಮು, ಪುಟ್ಟರಾಜು, ಚನ್ನಪ್ಪ, ಕೆ.ಎಚ್.ಶಿವರಾಜು ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net