ಭ್ರಷ್ಟಮುಕ್ತ ಮೋದಿಗೆ ಬೆಂಬಲ

IMG-20240424-WA0111
Published on

ಪಾಂಡವಪುರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಖಜಾನೆ ಬರಿದಾಗಿದ್ದು, ರೈತ ಕುಲ ನಾಶವಾಗುತ್ತಿದೆ ಎಂದು ಜಾತ್ಯತೀತ ಜನತಾ ಯುವ ಶಕ್ತಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಿರಂಜನ್ ಆರೋಪಿಸಿಸಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷದ ಅವಧಿಯಲ್ಲಿ ಐದು ಗ್ಯಾರಂಟಿಗಳಿಗಾಗಿ ಸುಮಾರು 1.5 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಸಾಲದ ಹೊರೆ ಸಾಮಾನ್ಯ ಜನರ ಮೇಲೆಯೇ ಬೀಳಲಿದೆ. ಜತೆಗೆ 11.5 ಸಾವಿರ ಕೋಟಿ ರೂ. ಪರಿಶಿಷ್ಟ ಜಾತಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭ್ರಷ್ಟಮುಕ್ತ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಘಟನೆ ಬೆಂಬಲಿಸಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾದರೆ ಕೇಂದ್ರ ಸರ್ಕಾರದಲ್ಲಿ ಕೃಷಿ ಸಚಿವರಾಗಲಿದ್ದು, ಇಲಾಖೆಯ ಅನುದಾನದಲ್ಲಿ ರಾಜ್ಯಕ್ಕೆ ಹೆಚ್ಚಿನ ಪಾಲು ಸಿಗಲಿದೆ. ಹೀಗಾಗಿ ಎಚ್‌ಡಿಕೆ ಬೆಂಬಲಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಎಚ್.ಕೆ.ನವೀನ್, ಉಪಾಧ್ಯಕ್ಷ ಕಟ್ಟೇರಿ ಕೆ.ಅನಿಲ್ ಕುಮಾರ್, ಕಾರ್ಯದರ್ಶಿ ರವಿಕುಮಾರ್, ಶ್ರೀರಂಗಪಟ್ಟಣ ಮಂಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net