ಭ್ರಷ್ಟಾಚಾರ ನಿರ್ಮೂಲನೆಗೆ ಮೋದಿ ಬೆಂಬಲಿಸಿ

New kalaghatagi joshi newq 77
Published on

ಕಲಘಟಗಿ : ಭ್ರಷ್ಟಾಚಾರವೆಂದರೆ ಬಡವರ ಹೊಟ್ಟೆಗೆ ಹೊಡೆದಂತೆ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಹಲವಾರು ಉಪಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಭಾರತದಲ್ಲಿ ಕಡುಬಡತನವನ್ನು ಕೊನೆಗೊಳಿಸಬೇಕೆಂದು ಕಳೆದ ಹತ್ತು ವರ್ಷಗಳಿಂದ ಶ್ರಮಿಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿದರು.

ಕಲಘಟಗಿ ವಿಧಾನಸಭಾ ಕ್ಷೇತ್ರದ ಕಲಕೇರಿ, ಮನಗುಂಡಿ ಮತ್ತು ಹಳ್ಳಿಗೇರಿ ಗ್ರಾಮಗಳಲ್ಲಿ ಗುರುವಾರ ಆಯೋಜಿಸಿದ್ದ ಪ್ರಚಾರ ಸಭೆಗಳಲ್ಲಿ ಪ್ರಲ್ಹಾದ ಜೋಶಿ ಅವರು ಮತ ಯಾಚಿಸಿ, ಮಾತನಾಡಿದರು.

ಸರ್ವ ಸಮುದಾಯದ ಏಳಿಗೆ ಮೋದಿ ಅವರಿಂದ ಮಾತ್ರ ಸಾಧ್ಯ. ಹಾಗಾಗಿ, ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಬೇಕು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಮನವಿ ಮಾಡಿದರು.

ದೇಶದ ಆರ್ಥಿಕ ವ್ಯವಸ್ಥೆ ಸುಧಾರಣೆಯ ಜೊತೆಗೆ ನಮ್ಮ ಮೂಲ ಸಂಸ್ಕೃತಿಯ ಗತ ವೖಭವ ಮತ್ತೆ ಪುನರುಜ್ಜೀವನಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಎಲ್ಲರೂ ಮೋದಿಯವರ ಪರ ನಿಲ್ಲಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಪಕ್ಷದ ಪ್ರಮುಖರಾದ ಆರತಿ ಹಿರೇಮಠ, ಕಲ್ಮೇಶ ಬೇಲೂರು, ರುದ್ರಗೌಡ ಪಾಟೀಲ, ಮಾಲತೇಶ ತೌಲಿ, ಬಸವರಾಜ ಮನಗುಂದ, ಮಲ್ಲನಗೌಡ ಪಾಟೀಲ, ಬಸವರಾಜ ಕುಂದಗೋಳಮಠ, ಮಡವಾಳಿ ಬಾವಕ್ಕನವರ, ಸಿದ್ದಪ್ಪ ಗಮನಕಟ್ಟಿ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net