ಪ್ರಜಾಪ್ರಭುತ್ವದ ಉಳಿಯಲು ಇಂಡಿಯಾ ಮೈತ್ರಿಕೂಟ ಬೆಂಬಲಿಸಿ

23 KRN-1
ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಪೂರ್ವಭಾವಿ ಸಭೆಯಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು. ದೊಡ್ಡಸ್ವಾಮೇಗೌಡ, ಗೋವಿಂದೇಗೌಡ ಇದ್ದರು.
Published on

ಕೆ.ಆರ್.ನಗರ: ದೇಶದಲ್ಲಿ ಪ್ರಜಾಪ್ರಭುತ್ವದ ಉಳಿಯಬೇಕಾದರೆ ಈ ಬಾರಿ ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ಸಿಗಬೇಕು. ಅಂತೆಯೇ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಗೆಲ್ಲಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಕನಕನಗರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಿ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡರು ಸರಳ, ಸಜ್ಜನ ವ್ಯಕ್ತಿ. ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ನಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಬೇಕು ಎಂದು ಕೋರಿದರು.

ಮಾ.27 ರಂದು ಪಟ್ಟಣದ ಡಾ.ರಾಜಕುಮಾರ್ ಬಾನಂಗಳದಲ್ಲಿ ಪಕ್ಷದ ಜನಪ್ರತಿನಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದ್ದು, ಎಲ್ಲರೂ ಭಾಗವಹಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ, ತಾಪಂ ಮಾಜಿ ಸದಸ್ಯ ಗೋವಿಂದೇಗೌಡ ಮಾತನಾಡಿದರು. ಜಿಪಂ ಮಾಜಿ ಸದಸ್ಯರಾದ ರಾಜಯ್ಯ, ಶಿವರಾಮು, ಪುರಸಭಾ ಸದಸ್ಯರಾದ ಕೋಳಿಪ್ರಕಾಶ್, ನಟರಾಜು ಕೆ.ಆರ್.ನಗರ ಬ್ಲಾಕ್ ಕಾಮಗ್ರಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ವಕ್ತರಾ ಸೈಯದ್ ಜಾಬೀರ್, ನಗರಾದ್ಯಕ್ಷ ಎಂ.ಜೆ.ರಮೇಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net