ಅಂಗವಿಕಲರಿಗೆ ಪ್ರೋತ್ಸಾಹ ನೀಡಿ

2blrp2
Published on

ಬೇಲೂರು: ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಅಂಗವಿಕಲರು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುವ ಮೂಲಕ ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ತೋರಿಸಬೇಕಿದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಹೇಳಿದರು.


ಪುರಸಭೆಯಿಂದ ಸೋಮವಾರ ಅಂಗವಿಕಲರಿಗೆ ತ್ರಿಚಕ್ರ ಸೈಕಲ್ ವಿತರಿಸಿ ಮಾತನಾಡಿದ ಅವರು, ಅಂಗವಿಕಲರಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ನೀಡಿ ಪ್ರೋತ್ಸಾಹಿಸಿದರೆ ಎಲ್ಲ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುತ್ತಾರೆ. ಆದರೆ, ಅಂಗವಿಕಲರೆಂದು ಅವರನ್ನು ಪ್ರೋತ್ಸಾಹಿಸದಿದ್ದರೆ ಅವರು ಏನೂ ಸಾಧಿಸಲು ಸಾಧ್ಯವಿಲ್ಲ. ಆದ್ದರಿಂದ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಪುರಸಭೆಯಿಂದ ಅವರಿಗೆ ಮೀಸಲಾದ ಅನುದಾನದಲ್ಲಿ ಅರ್ಹರನ್ನು ಆಯ್ಕೆ ಮಾಡಿ ತ್ರಿಚಕ್ರ ಸೈಕಲ್‌ಗಳೊಂದಿಗೆ ವಿವಿಧ ಪರಿಕರಗಳನ್ನು ವಿತರಿಸುತ್ತಿದ್ದೇವೆ ಎಂದರು.


ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಿಬ್ಬಂದಿ ಹರೀಶ್, ಅಂಗವಿಕಲರ ಸಂಘದ ಅಧ್ಯಕ್ಷ ಪುರುಷೋತ್ತಮ್, ಆರೋಗ್ಯಾಧಿಕಾರಿ ಜ್ಯೋತಿ, ಪುರಸಭೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net