

ಚನ್ನರಾಯಪಟ್ಟಣ: ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಬಡ್ಡಿ ಪಂದ್ಯವನ್ನು ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ತಿಳಿಸಿದರು.
ಪಟ್ಟಣದ ಪೇಟೆ ಪ್ರೌಢಶಾಲೆ ಮೈದಾನದಲ್ಲಿ ಡಾ.ಸೂರಜ್ ರೇವಣ್ಣ ಅವರ 36ನೇ ಹುಟ್ಟು ಹಬ್ಬದ ಪ್ರಯುಕ್ತ ಡಾ.ಸೂರಜ್ ರೇವಣ್ಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಆಯೋಜಿಸಿದ್ದ ಕಬಡ್ಡಿ ಕಪ್ 4.0ಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಪಂದ್ಯಾವಳಿಗಳನ್ನು ನಡೆಸುವುದು ಅಗತ್ಯ. ನಾಲ್ಕು ವರ್ಷಗಳಿಂದ ಕಬಡ್ಡಿ ಪಂದ್ಯ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಟಿಪಿಸಿಎಂಎಸ್ ನಿರ್ದೇಶಕ ಎಂ.ಆರ್.ಅನಿಲ್ ಮರಗೂರು, ಪುರಸಭೆ ಮಾಜಿ ಅಧ್ಯಕ್ಷೆ ರೇಖಾ ಅನಿಲ್, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಎನ್.ವೆಂಕಟೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗುಳಳ್ಳಿ ನಂಜುಂಡಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊನ್ನ ಶೆಟ್ಟಿಹಳ್ಳಿ ಪುಟ್ಟಸ್ವಾಮಿಗೌಡ, ತಾಲೂಕು ಪಂಚಾಯಿತಿ ಸದಸ್ಯ ಗ್ಯಾರಳ್ಳಿ ರವೀಶ್, ಜೆಡಿಎಸ್ ಮುಖಂಡರಾದ ನೆಟ್ಟಕೆರೆ ನಾಗರಾಜು, ಕರಡೆವು ಸತೀಶ್, ದೊರೆ, ಎ.ಎಂ.ಬಾಲಚಂದ್ರ, ತಿಪ್ಪೂರು ಬಸವರಾಜು, ಪುರಸಭೆ ಸದಸ್ಯರಾದ ಸುರೇಶ್, ಶ್ರೀಧರ ಉಪಸ್ಥಿತರಿದ್ದರು. ಆರೋಗ್ಯ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.