ಯುವ ಅಭ್ಯರ್ಥಿಗಳನ್ನು ಬೆಂಬಲಿಸಿ: ಮುತ್ತಪ್ಪ

be58da35-5df3-4e64-b65a-85766458b481
Published on

ಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯ ಎರೆಡು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಯುವ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಪ್ರಜಾಪರಿರ್ವತನೆ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಸ್.ಮುತ್ತಪ್ಪ ಮನವಿ ಮಾಡಿದರು.


ರಾಜ್ಯ ಸಮಿತಿಯು ಕಾಂಗ್ರೆಸ್ ಆಭ್ಯರ್ಥಿಗಳಾದ ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಬೆಂಬಲಿಸುವಂತೆ ನಿರ್ದೇಶನ ನೀಡಿದ್ದಾರೆ. ಅದರಂತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧಿಸಲಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಹಾಗೂ ವೇದಿಕೆಯ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ.ಗಣೇಶ್ ಮಾತನಾಡಿ, ಕಾಂಗ್ರೆಸ್‌ನ ಅಭ್ಯರ್ಥಿಗಳು ಜನ ಸಂಯೋಜಕರಾಗಿದ್ದಾರೆ. ಪ್ರಜ್ಞಾವಂತ ಮತದಾರರು ಅಭ್ಯರ್ಥಿಗಳಿಗೆ ಜನಸೇವೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.


ಸುದ್ದಿಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ಹೊನ್ನಪ್ಪ, ಜಿಲ್ಲಾ ಖಜಾಂಚಿ ಜಿ.ರಾಮ, ಮುಖಂಡರಾದ ಸುನೀಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net