

ಶನಿವಾರಸಂತೆ: ವಿದ್ಯಾರ್ಥಿಗಳ ಸಾರ್ವತ್ರಿಕ ವಿಷಯ ಆಧಾರಿತ ರಾಜ್ಯ ಮಟ್ಟದ ಬ್ರೈನ್ ಓಥಾನ್ ಪರೀಕ್ಷೆಯಲ್ಲಿ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಷಯಗಳ ಕುರಿತಾದ ಪರೀಕ್ಷೆಯಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
ತ್ತೀಚೆಗೆ ಶಾಲೆಯ ಆವರಣದಲ್ಲಿ ನಡೆದ ಪರೀಕ್ಷೆಯಲ್ಲಿ ರಾಜ್ಯದ ವಿವಿಧ ಶಾಲೆಗಳಿಂದ 57 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಪ್ರಜ ಗುರುಕುಲ ಶಾಲೆಯ 40 ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.