ಬರ ಪರಿಹಾರ ವಿತರಣೆಗೆ ಸುಪ್ರೀಂ ಚಾಟಿ

CM Siddaramaiah speak with media
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
Published on

ಶಿವಮೊಗ್ಗ: ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ. ರಾಷ್ಟ್ರೀಯ ವಿಪತ್ತು ಪ್ರಾಧಿಕಾರದ ಪ್ರಕಾರ ರಾಜ್ಯಕ್ಕೆ 34 ಸಾವಿರ ಕೋಟಿ ರೂ. ಪರಿಹಾರ ನೀಡಬೇಕಿದೆ. ವರದಿ ಸಲ್ಲಿಸಿ 6 ತಿಂಗಳು ಕಳೆದರೂ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿ ಆಗಿದೆ ಎಂಬುದಕ್ಕೆ ಕಿಡಿಕಾರಿದ ಸಿಎಂ, ಖಜಾನೆ ಎಲ್ಲಿ ಖಾಲಿ ಆಗಿದೆ. ಅವರೇನು ಬಂದು ನೋಡಿದ್ದಾರಾ ?, 120 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದೇವೆ. ಎಲ್ಲ ಐದು ಗ್ಯಾರಂಟಿ ಈಡೇರಿಸಿದ್ದೇವೆ. ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ ಎಂದು ಹೇಳಿದರು. ನಮ್ಮ ಅವಧಿಗಿಂತ ಬಿಜೆಪಿ ಅವಧಿಯಲ್ಲೇ ಅಪರಾಧಗಳು ನಡೆದಿದೆ. 2022ರಲ್ಲಿ 1,370 ಕೊಲೆಗಳು ನಡೆದಿವೆ. 2023ರಲ್ಲಿ 1,295, 2024ರಲ್ಲಿ 360 ಕೊಲೆಗಳು ನಡೆದಿವೆ. 2022ರಲ್ಲಿ ಬಿಜೆಪಿ ಅಧಿಕಾರದಲ್ಲಿ ಇತ್ತಲ್ವಾ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net