ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ; ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ನಿರಾಳ

Front Flyer
Published on

ನವದೆಹಲಿ: ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆರು ವಾರಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಬಿಬಿಎಂಪಿ ಚುನಾವಣೆ ಮುಂದೂಡಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ, ನ್ಯಾ. ಎ.ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠ ಫೆಬ್ರವರಿ 5ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದೆ. ರಾಜ್ಯದ ಅರ್ಜಿಗೆ ಸಂಬಂಧಿಸಿ ಉತ್ತರ ನೀಡುವಂತೆ ರಾಜ್ಯ ಚುನಾವಣಾ ಆಯೋಗ, ಹೈಕೋರ್ಟ್​ನಲ್ಲಿ ಅರ್ಜಿದಾರರಾಗಿದ್ದ ಎಂ ಶಿವರಾಜು, ಅಬ್ದುಲ್ ವಾಜಿದ್ ಮತ್ತು ರವಿ ಜಗನ್​ಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ತಡೆ: ಸುಪ್ರೀಂಕೋರ್ಟ್​ನ ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಕ್ರಿಸ್​ವುಸ್ ರಜೆ ಬಳಿಕ ವಿಸõತ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ನ್ಯಾಯಯುತ ಮತ್ತು ಸರ್ವಾನುಮತದಿಂದ ಜಾರಿಗೆ ತರಲಾದ ಶಾಸನಕ್ಕೆ ವ್ಯತಿರಿಕ್ತವಾಗಿ ಚುನಾವಣೆ ನಡೆಸಲು ಹೈಕೋರ್ಟ್ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಇದನ್ನು ಒಪ್ಪಲಾಗದು ಎಂದು ಸರ್ಕಾರ ಮೇಲ್ಮನವಿಯಲ್ಲಿ ತಿಳಿಸಿತ್ತು. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 243ಕ್ಕೆ ಏರಿಕೆ ಮಾಡಿರುವ ಕರ್ನಾಟಕ ಪೌರ ನಿಗಮ 3ನೇ ತಿದ್ದುಪಡಿ ಕಾಯ್ದೆ 2020ಯ (ತಿದ್ದುಪಡಿ ಕಾಯ್ದೆ) ಸಿಂಧುತ್ವವನ್ನು ಡಿ.4ರಂದು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಹೈಕೋರ್ಟ್ ಏನು ಹೇಳಿತ್ತು?: ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಸರ್ಕಾರ ಪಾಲಿಕೆಯನ್ನು 243 ವಾರ್ಡ್​ಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಸರಿ ಎನಿಸಿದರೂ, ಅದು ಈ ಚುನಾವಣೆಗೆ ಅನ್ವಯಿಸುವುದಿಲ್ಲ. ಚುನಾವಣೆಗೆ ಸಿದ್ಧತೆ ಶುರುವಾದ ಬಳಿಕ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಹೀಗಾಗಿ ಹೊಸ ಕಾಯ್ದೆಯು ಈ ಚುನಾವಣೆಗೆ ಅನ್ವಯಿಸುವುದಿಲ್ಲ. ಕೇವಲ ಆ ಆಧಾರದಲ್ಲಿ ಚುನಾವಣೆ ಮುಂದೂಡಲಾಗದು. ಆದ್ದರಿಂದ ಪಾಲಿಕೆಗೆ ಸಂವಿಧಾನದ ವಿಧಿ 243(ಯು) ಪ್ರಕಾರ ಚುನಾವಣೆ ನಡೆಸಬೇಕು ಎಂದು ಹೇಳಿತ್ತು.

ರಾಜ್ಯ ಸರ್ಕಾರದ ವಾದ: ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 1976ರ ಕೆಎಂಸಿ ಆಕ್ಟ್ ಗೆ ತಿದ್ದುಪಡಿ ತರಲಾಗುತ್ತಿದೆ. ಬೆಂಗಳೂರಿನಲ್ಲಿ ವಾರ್ಡ್ ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲಾಗುತ್ತಿದೆ. ಈ ಪ್ರಕ್ರಿಯೆಗೆ ಸಮಯ ಬೇಕಿರುವುದರಿಂದ ಹೈಕೋರ್ಟ್ ಆದೇಶದಂತೆ ಆರು ವಾರಗಳಲ್ಲಿ ಚುನಾವಣಾ ಘೊಷಣೆ ಮಾಡಲು ಸಾಧ್ಯವಿಲ್ಲ ಎಂದು ವಿವರಣೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net