ರಾಹುಲ್ ಗಾಂಧಿಗೆ ಶಿಕ್ಷೆಗೆ ಸುಪ್ರೀಂ ತಡೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

mng-aug4-congress1
Published on

ಮಂಗಳೂರು: ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿದ್ದ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.


ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ರಾಹುಲ್ ಗಾಂಧಿ ಪ್ರಕರಣದಲ್ಲಿ ನ್ಯಾಯಕ್ಕೆ ಜಯಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದು ಸತ್ಯ ಮತ್ತು ಪ್ರೀತಿಗೆ ಸಂದ ಜಯ ಹಾಗೂ ಸುಳ್ಳು ಮತ್ತು ದ್ವೇಷಕ್ಕೆ ಆದ ಸೋಲು. ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.


ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮ.ನ.ಪಾ ವಿಪಕ್ಷ ನಾಯಕ ನವೀನ್ ಡಿಸೋಜ,ಮುಖಂಡರಾದ ಎ.ಸಿ.ವಿನಯರಾಜ್, ಅಶ್ರಫ್ ಬಜಾಲ್, ಸಂಶುದ್ದೀನ್ ಬಂದರ್, ಅನಿಲ್ ಕುಮಾರ್ ಪೂಜಾರಿ, ಲುಕ್ಮಾನ್ ಬಂಟ್ವಾಳ್, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ಕುಮಾರ್ ದಾಸ್, ಮನೋರಾಜ್ ರಾಜೀವ, ಡಾ.ಬಿ.ಜಿ.ಸುವರ್ಣ, ಪದ್ಮನಾಭ ಅಮೀನ್, ಸುಹಾನ್ ಆಳ್ವ, ತನ್ವೀರ್ ಶಾ, ಶಾಂತಲಾ ಗಟ್ಟಿ, ಟಿ.ಹೊನ್ನಯ್ಯ, ಶಬ್ಬೀರ್ ಎಸ್.ನೀರಜ್ ಚಂದ್ರಪಾಲ್, ನಝೀರ್ ಬಜಾಲ್, ಟಿ.ಕೆ.ಸುಧೀರ್ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net