ಬಂಟ ಕಲಾ ಸಂಭ್ರಮ ಭಾರತ ದರ್ಶನ ಸ್ಪರ್ಧೆ : ಸುರತ್ಕಲ್ ಬಂಟರ ಸಂಘ ಪ್ರಥಮ

mng-8sep-bunts
Published on


ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಂಟ್ಸ್ ಹಾಸ್ಟೆಲ್ ವತಿಯಿಂದ ಆಯೋಜಿಸಲಾದ ’ಬಂಟ ಕಲಾ ಸಂಭ್ರಮ ಭಾರತ ದರ್ಶನ
ಸ್ಪರ್ಧೆಯಲ್ಲಿ ರಾಜೇಶ್ವರಿ ಡಿ ಶೆಟ್ಟಿ ನಿರ್ದೇಶನದಲ್ಲಿ ಸುರತ್ಕಲ್ ಬಂಟರ ಸಂಘ ಪ್ರದರ್ಶಿಸಿದ ಭಾರತ ದರ್ಶನ ಪ್ರಹಸನ ಒಂದು ಲಕ್ಷ ರೂ. ನಗದು ಸಹಿತ ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಪ್ರಶಸ್ತಿ ವಿತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಯರಾಮ ಶೆಟ್ಟಿ ಮತ್ತು ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ ಹಾಗೂ ಪದಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.
ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಉದ್ಯಮಿ ಲಕ್ಷ್ಮೀಶ ಭಂಡಾರಿ, ಗಿರೀಶ್ ಶೆಟ್ಟಿ ಕಟೀಲು, ಗಣೇಶೋತ್ಸವ ಸಮಿತಿಯ ಜಿಲ್ಲಾ ಸಂಚಾಲಕ ನಾಗರಾಜ ಶೆಟ್ಟಿ, ಮುನಿಯಾಲ್ ಉದಯಕುಮಾರ್ ಶೆಟ್ಟಿ, ಸುಧಾಕರ ಪೂಂಜ, ಆಶಾಜ್ಯೋತಿ ರೈ ಉಪಸ್ಥಿತರಿದ್ದರು.
ತೀರ್ಪುಗಾರರಾಗಿ ಮೈಮ್ ರಮೇಶ್ ಸುರೇಂದ್ರನಾಥ ಶೆಟ್ಟಿ ಮಾರ್ನಾಡ್, ಅವಿನಾಶ್ ಕಾಮತ್ ಭಾಗವಹಿಸಿದ್ದರು. ಕಿರಣ್ ಪಕ್ಕಳ ಮತ್ತು ಸತೀಶ್ ಶೆಟ್ಟಿ ಕೊಡಿಯಾಲ್ಬೈಲ್ ಕಾರ್ಯಕ್ರಮ್ ನಿರೂಪಿಸಿದರು.
ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘ ಪ್ರಥಮ, ಬೆಳ್ತಂಗಡಿ ಬಂಟರ ಸಂಘ ದ್ವಿತೀಯ, ಹಾಗೂ ಉಳ್ಳಾಲ ಬಂಟರ ಸಂಘ
ತೃತೀಯ ಪ್ರಶಸ್ತಿಯನ್ನು ಪಡೆಯಿತು.
--ಬಾಕ್ಸ್--
*205 ಮಂದಿಯ ಸುರತ್ಕಲ್ ತಂಡ*
ಸುರತ್ಕಲ್ ಬಂಟರ ಸಂಘ ಪ್ರಸ್ತುತ ಪಡಿಸಿದ ಕಲಾಹಂದರ ಭರತರಾಜನಿಂದ ನಮ್ಮ ರಾಷ್ಟ್ರ ಭಾರತವಾಯಿತು ಎಂಬ ನೃತ್ಯದ ಮೂಲಕ ಪ್ರಾರಂಭಗೊಂಡಿತು. ಭಾರತವನ್ನು ವಿಶ್ವಗುರುವನ್ನಾಗಿಸುವಲ್ಲಿ ಮುಂದಿನ ಪೀಳಿಗೆಯಾದ ಮಕ್ಕಳಲ್ಲಿ ಪ್ರೀತಿ, ವಿಶ್ವಾಸ ದೇಶಪ್ರೇಮವನ್ನು ಬಿತ್ತಬೇಕೆನುವ ಸಂದೇಶ ಭಾರತ ದರ್ಶನದಲ್ಲಿ ಒಳಗೊಂಡಿತ್ತು. ರಾಜೇಶ್ವರಿ ಡಿ ಶೆಟ್ಟಿಯವರು ರಚಿಸಿ, ನಿರ್ದೇಶಿಸಿದ ಕತೆಗೆ ವಿನೋದ್ ಶೆಟ್ಟಿ ಸಾಥ್ ನೀಡಿದರು. ರಜತ್ ಸಸಿಹಿತ್ಲು ಮತ್ತು ದೀಕ್ಷಾ ನೃತ್ಯ ಸಂಯೋಜನೆ ಮಾಡಿದ್ದರು.
ಇಪ್ಪತ್ತು ನಿಮಿಷಗಳ ಕಾಲಾವಧಿಯ ಭಾರತ ದರ್ಶನ ಪ್ರಹಸನದಲ್ಲಿ 70 ಪುಟಾಣಿ ಮಕ್ಕಳೊಂದಿಗೆ ಒಟ್ಟು 205 ಮಂದಿ ಕಲಾವಿದರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net