ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಪುನರಾಯ್ಕೆ

Btw_Suresh Kulal
Published on

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘದ ನೂತನ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಪುನರಾಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಜನಾರ್ದನ ಬೊಂಡಾಲ ಆಯ್ಕೆಗೊಂಡರು.

ಬಂಟ್ವಾಳದ ಬೈಪಾಸ್ ಜಂಕ್ಷನ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಸಮಾಜ ಸೇವಾ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಡಾ.ಅಮ್ಮೆಂಬಳ ಬಾಳಪ್ಪ ಅವರ ಕನಸು ನನಸಾಗಿದೆ. ಅಧ್ಯಕ್ಷ ಸುರೇಶ್ ಕುಲಾಲ್ ಮತ್ತವರ ತಂಡದ ಪ್ರಾಮಾಣಿಕ ಕೆಲಸದಿಂದಾಗಿ ಇಂದು ಸಂಘ ಜಿಲ್ಲಾಮಟ್ಟದಲ್ಲಿ ಎದ್ದು ಕಾಣುತ್ತಿದೆ ಎಂದರು.

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬರಬೈಲು ಮುಖ್ಯಅತಿಥಿಯಾಗಿ ಭಾಗವಹಿಸಿದರು. ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಯಶೋಧರ ಕರ್ಬೆಟ್ಟು, ನೂತನ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಜನಾರ್ದನ ಕುಲಾಲ್ ಬೊಂಡಾಲ ಉಪಸ್ಥಿತರಿದ್ದರು. ನಿರ್ದೇಶಕ ಸತೀಶ್ ಪಲ್ಲಮಜಲು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net