ಸ್ಪರ್ಧೆಯಲ್ಲಿ ಕರ್ನಾಟಕ, ಕೇರಳ, ಗೋವಾ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆಗಳಿಂದ ಸರ್ಫಿಂಗ್ ಚಾಂಪಿಯನ್‌ಗಳು ಭಾಗವಹಿಸುತ್ತಿದ್ದಾರೆ. ದೇಶದಲ್ಲಿ ಸರ್ಫಿಂಗ್ ಹಾಗೂ ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ಕ್ರೀಡೆಗಳ ಆಡಳಿತ ಸಂಸ್ಥೆಯಾದ ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಆಶ್ರಯದಲ್ಲಿ ನಡೆಯುವ ಈ ಸ್ಪರ್ಧೆಯನ್ನು ನವ ಮಂಗಳೂರು ಬಂದರು ಪ್ರಾಧಿಕಾರ ಸತತ ಮೂರನೇ ವರ್ಷವೂ 'ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್' ಶೀರ್ಷಿಕೆ ಪ್ರಾಯೋಜಕರಾಗಿ ಬೆಂಬಲಿಸುತ್ತಿದೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಸರ್ಫಿಂಗ್ ಅಸೋಸಿಯೇಷನ್ ಸಹ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.