ಯುವ ಶಸ್ತ್ರಚಿಕಿತ್ಸಕರಿಗೆ ತರಬೇತಿ ಕಾರ್ಯಾಗಾರ

Published on

ಹುಬ್ಬಳ್ಳಿ: ಬೆನ್ನು ಮೂಳೆಯ ಶಸ್ತ್ರಚಿಕಿತ್ಸಾ ಕಾರ್ಯವಿಧಾನಗಳಲ್ಲಿ ಯುವ ನರರೋಗ ತಜ್ಞರಿಗೆ ಶಸ್ತ್ರಚಿಕಿತ್ಸಾ ಕೌಶಲ ಪರಿಷ್ಕರಿಸಲು ಮತ್ತು ಶಸ್ತ್ರಚಿಕಿತ್ಸಾ ಶ್ರೇಷ್ಠತೆಯನ್ನು ಹೆಚ್ಚಿಸಲು ನಗರದ ಬಾಲಾಜಿ ಆಸ್ಪತ್ರೆಯಲ್ಲಿ ಮೆಡಟ್ರಾನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಒಂದು ದಿನದ ಪ್ರಾಯೋಗಿಕ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 2ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು, ರಾಜ್ಯದ ಯುವ ಶಸ್ತ್ರಚಿಕಿತ್ಸಕರು ಪಾಲ್ಗೊಳ್ಳಲಿದ್ದಾರೆ.

ಪ್ರಸ್ತುತ ವೈದ್ಯಕಿಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳ ಬಳಕೆ ಹೆಚ್ಚುತ್ತಿದ್ದು, ಕೌಶಲದ ಕೊರತೆಯಿಂದ ಯುವ ಶಸ್ತ್ರ ಚಿಕಿತ್ಸಕರಿಗೆ ಅನೇಕ ಸವಾಲುಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ನೆರವಾಗುವ ನಿಟ್ಟಿನಲ್ಲಿ ಮೆಡಟ್ರಾನಿಕ್ಸ್ ನ ನವೀನ ತಂತ್ರಜ್ಞಾನದೊಂದಿಗೆ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಯಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಬಾಲಾಜಿ ಆಸ್ಪತ್ರೆ ಚೇರ್ಮನ್, ಖ್ಯಾತ ನರರೋಗ ಶಸ್ತ್ರಚಿಕಿತ್ಸಕ ಡಾ. ಕ್ರಾಂತಿಕಿರಣ ತಿಳಿಸಿದ್ದಾರೆ.

ಕಾರ್ಯಾಗಾರವು ಉಪನ್ಯಾಸ ಮತ್ತು ನೇರ ಪ್ರಾಯೋಗಿಕ ಪ್ರದರ್ಶನಗಳನ್ನು ಒಳಗೊಂಡಿದ್ದು, ತಜ್ಞ ವೈದ್ಯರು, ಶಸ್ತ್ರಚಿಕಿತ್ಸಕರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net