ಪಂಡಿತ್ ರಾಜೀವ್ ತಾರನಾಥಗೆ ಶಸ್ತ್ರಚಿಕಿತ್ಸೆ

Published on

ಮೈಸೂರು: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರನಾಥ ಅವರು ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಮೂಳೆ ಮುರಿದಿದ್ದರಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ಕಳೆದ 24 ದಿನಗಳ ಹಿಂದೆ ಕುವೆಂಪುನಗರದಲ್ಲಿರುವ ಅವರ ಮನೆಯಲ್ಲಿ ಕುಸಿದು ಬಿದ್ದಿದ್ದರು. ಇದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಅದಕ್ಕೆ ವೈದ್ಯ ಡಾ.ಪ್ರಶಾಂತ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಮೂರು ದಿನಗಳಿಂದ ಮೂತ್ರಕೋಶದ ಸೋಂಕು ಉಂಟಾಗಿದ್ದು, ಅದಕ್ಕೂ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಭೇಟಿಯಾಗುವ ಸಂಗೀತಗಾರರು ಹಾಗೂ ಲೇಖಕರೊಂದಿಗೆ ಮಾತನಾಡುತ್ತಿದ್ದಾರೆ. 93 ವರ್ಷ ವಾದ್ದರಿಂದ ಚೇತರಿಕೆ ನಿಧಾನವಾಗಿದೆ. ಇನ್ನೂ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದ್ದು, ವೈದ್ಯರು ಯಾವಾಗ ಬಿಡುಗಡೆ ಮಾಡುತ್ತಾರೆ ಎನ್ನುವುದು ತಿಳಿದಿಲ್ಲ ಎಂದು ಲೇಖಕ ಟಿ.ಎಸ್.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net