ಗುಣಮಟ್ಟದ ಕಾಮಗಾರಿ ಕೈಗೊಳ್ಳಿ

0210 Surapur 03
ಸುರಪುರದಲ್ಲಿ ಬಾಲಕಿಯರ ವಸತಿ ನಿಲಯದ ಕಾಮಗಾರಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಯಂಕೋಬ ಸಾಹುಕಾರ, ಶಾಂತಗೌಡ ಚನ್ನಪಟ್ಟಣ, ಎಇಇ ಎಸ್.ಜಿ. ಪಾಟೀಲ್ ಇತರರಿದ್ದರು.
Published on

ಸುರಪುರ: ಹುಣಸಗಿ ಮತ್ತು ಸುರಪುರ ಅವಳಿ ತಾಲೂಕಿನ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯ ನಿರ್ಮಿಸಲಾಗುತ್ತಿದ್ದು, ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಎಚ್ಚರಿಕೆ ನೀಡಿದರು.

ನಗರದ ತಾಲೂಕು ನ್ಯಾಯಾಲಯದ ಬಳಿ ಸೋಮವಾರ ಎಸ್‌ಸಿಪಿ ಯೋಜನೆಯಡಿ ಬಾಲಕಿಯರ ವಸತಿ ನಿಲಯದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂರು ಬಾರಿ ಶಾಸಕನಾಗಿ ಶಿಕ್ಷಣದ ಪ್ರಗತಿಗಾಗಿ ಹಲವಾರು ಕೊಡುಗೆ ನೀಡಿದ್ದೇನೆ.ಈ ಮೊದಲು ನೀಡಿದ ಭರವಸೆಯಂತೆ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ ಎಂದು ಹೇಳಿದರು.

೫.೫೧ ಕೋಟಿ ರೂ. ವೆಚ್ಚದಲ್ಲಿ ಬೃಹತ್ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಇದರ ಲಾಭ ಪಡೆದುಕೊಳ್ಳಬೇಕು. ಕಳಪೆ ಕಾಮಗಾರಿಯಾದರೆ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಯಂಕೋಬ ಸಾಹುಕಾರ, ಶಾಂತಗೌಡ ಚನ್ನಪಟ್ಟಣ, ಪಿಡಬ್ಲ್ಯೂಡಿ ಎಇಇ ಎಸ್.ಜಿ. ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net