

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರು | ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ವಿಜಯವಾಣಿ ಸುದ್ದಿಜಾಲ ಯಾದಗಿರಿ
ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(೬೭) ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವೆಂಕಟಪ್ಪ ನಾಯಕ. ಭಾನುವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.
ನಾಲ್ಕು ಬಾರಿ ಶಾಸಕರಾಗಿದ್ದರು. ಉಗ್ರಾಣ ನಿಗಮದ ಅಧ್ಯಕ್ಷರಾಗಿ ಈಚೆಗೆ ಅಧಿಕಾರ ಸ್ವೀಕರಿಸಿದ್ದರು. ನಾಳೆ ಸಂಜೆ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಜರಗಲಿದೆ