ಸಮಾಜದ ಅಂಕುಡೊಂಕು ತಿದ್ದಿದ ಶರಣ

21 MDG 1
Published on

ಮುಂಡರಗಿ: ಹನ್ನೆರಡನೇ ಶತಮಾನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜ ಅಂಕುಡೊಂಕು ತಿದ್ದುವ ಕೆಲಸ ಮಾಡಿದರು. ನೇರ ನುಡಿಯಿಂದ ಕೂಡಿದ ಅವರ ವಚನಗಳು ಸಮಾಜದಲ್ಲಿನ ದೋಷಗಳನ್ನು ಸರಿಪಡಿಸುವಂತಿದ್ದವು ಎಂದು ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಾರ್ಯಾಲಯ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ಪುರಸಭೆ ಸದಸ್ಯ ನಾಗರಾಜ ಹೊಂಬಳಗಟ್ಟಿ ಮಾತನಾಡಿ, ಅಂಬಿಗರ ಚೌಡಯ್ಯನವರ ವಚನಗಳ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯ ನಡೆಸಬೇಕು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಗೈರಾಗಿದ್ದಾರೆ. ಸಣ್ಣ ಸಮಾಜದ ಕಾರ್ಯಕ್ರಮವೆಂದು ನಿಷ್ಕಾಳಜಿ ಮಾಡುವುದು ಸರಿಯಲ್ಲ ಎಂದರು.

ನಿವೃತ್ತ ಶಿಕ್ಷಕ ಆರ್.ಬಿ. ಮುಳ್ಳಳ್ಳಿ, ಫಕೀರೇಶ ಹುಳ್ಯಾಳ ಮಾತನಾಡಿದರು. ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಗ್ರೇಡ್-2 ತಹಸೀಲ್ದಾರ್ ಕೆ.ರಾಧಾ, ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ಲಕ್ಷ್ಮಣ ಕಾಗನೂರ, ನಾಗರಾಜ ಕೊರ್ಲಹಳ್ಳಿ, ಎಲ್.ಎಚ್. ಯಣ್ಣಿ, ರಾಮಚಂದ್ರ ಕುಕನೂರ, ಮಂಜುನಾಥ ರಾಟಿ, ಕಿರಣಕುಮಾರ ರಾಟಿ ಇತರರಿದ್ದರು. ಶಿರಸ್ತೇದಾರ್ ಬಿ.ಎಸ್. ಕನ್ನೂರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net