ಶರಣರ ವಚನ ತಿರುಚುವುದು ದಾರಿ ತಪ್ಪಿಸುವ ಕೆಲಸ

10Manju6
ಬೆಳಗಾವಿ ನಗರದ ಕನ್ನಡ ಭವನದಲ್ಲಿ ಈಚೆಗೆ ವಚನ ದರ್ಶನ ಪುಸ್ತಕವನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು. ಸದಾಶಿವಾನಂದ ಸ್ವಾಮೀಜಿ, ಯ.ರು.ಪಾಟೀಲ, ಡಾ.ಗುರುದೇವಿ ಹುಲೆಪ್ಪನವರಮಠ, ರತ್ನಪ್ರಭಾ ಬೆಲ್ಲದ, ಡಾ.ಅಲ್ಕಾ ಕಾಳೆ ಇದ್ದರು.
Published on

ಬೆಳಗಾವಿ: ಪ್ರಸಕ್ತ ದಿನಗಳಲ್ಲಿ ಬಸವಣ್ಣ ಮತ್ತು ಶರಣರ ಮೂಲ ಆದರ್ಶಗಳನ್ನು ಮರೆಮಾಚಲಾಗುತ್ತಿದೆ. ಹಾಗಾಗಿ, ಮೂಲ ವಚನಗಳ ಆಧಾರದ ಮೇಲೆ ಶರಣರು ಮತ್ತು ಬಸವಣ್ಣನ ನೈಜ ಅದರ್ಶಗಳ ಅಧ್ಯಯನಕ್ಕೆ ಮುಂದಾಗಬೇಕು ಎಂದು ಗದಗಿನ ಶಿವಾನಂದ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ ಹೇಳಿದರು.

ಇಲ್ಲಿನ ನೆಹರು ನಗರದ ಕನ್ನಡ ಭವನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ಮೂಢರು, ಬಸವಣ್ಣ ಮತ್ತು ಶರಣರ ವಚನಗಳನ್ನು ತಪ್ಪಾದ ಪ್ರಯೋಗ ಮತ್ತು ತಪ್ಪಾಗಿ ವ್ಯಾಖ್ಯಾನಿಸಿ ಪ್ರಸಕ್ತ ಪೀಳಿಗೆಯ ದಾರಿ ತಪ್ಪಿಸುತ್ತಿರುವುದು ಬೇಸರದ ಸಂಗತಿ. ಅವರು ಸಮಾಜದ ದಾರಿ ತಪ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿವೃತ್ತ ಪ್ರಾಧ್ಯಾಪಕಿ ಡಾ.ಗುರುದೇವಿ ಹುಲೆಪ್ಪನವರಮಠ ಅವರು ಕೃತಿ ಪರಿಚಯಿಸಿ, ಲಿಂಗಾಯತರು ಮನೆಯಲ್ಲಿ ಲಿಂಗಪೂಜೆ ಮತ್ತು ವಚನ ಅಧ್ಯಯನ ಕುರಿತು ಮುಂದಿನ ಪೀಳಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ಕನ್ನಡ ಭವನದ ಕಾರ್ಯದರ್ಶಿ ಯ.ರು.ಪಾಟೀಲ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಪ್ರಬುದ್ಧ ಭಾರತ ಸಂಯೋಜಕಿ ಡಾ.ಅಲ್ಕಾ ಕಾಳೆ, ಡಾ.ಬಸವರಾಜ ಜಗಜಂಪಿ, ಡಾ.ಜೆ.ಮಂಜಣ್ಣ, ಡಾ.ಶೈಲಜಾ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net