ಸಾಮಾಜಿಕ ನ್ಯಾಯಕ್ಕಾಗಿ ಸಮೀಕ್ಷೆ ಅವಶ್ಯ

FotoJet
Published on

ಗುಬ್ಬಿ: ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವ ಅತ್ಯವಶ್ಯಕತೆ ಇದೆ. ಮೀಸಲಾತಿ ಫಲ ಅನುಭವಿಸಲು ಹಿಂದುಳಿದ ವರ್ಗಗಳ ಎಲ್ಲ ಸಮುದಾಯ ಒಗ್ಗೂಡಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಾಗೃತ ಕರ್ನಾಟಕ ಸದಸ್ಯ, ವಕೀಲ ಕಿಶೋರ್​ ಕರೆ ನೀಡಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಅರಸರ ಕಾಲದಲ್ಲಿ ನಡೆಸಿದ ಸಮೀಕ್ಷೆಯಿಂದ ಇಲ್ಲಿಯವರೆಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಟ್ಟಭದ್ರರು ವಿರೋಧಿಸುತ್ತಲೇ ಬಂದಿದ್ದಾರೆ. ಸಂವಿಧಾನ ಬದ್ಧ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಸಮೀಕ್ಷೆ ಕಾರ್ಯ ಕೈಗೆತ್ತಿಕೊಂಡಿರುವುದು ಸ್ವಾಗತಾರ್ಹ ಎಂದರು.

ಜಾಗೃತ ಕರ್ನಾಟಕ ಸಂಘಟನೆಯಿಂದ ಇದೇ ತಿಂಗಳ 18ರಂದು " ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ&2025; ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ?' ಎಂಬ ವಿಷಯ ಕುರಿತು ವಿಚಾರಗೋಷ್ಠಿ ಆಯೋಜಿಸಿದೆ. ತುಮಕೂರು ನಗರದ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್​.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್​ನ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಾಗೃತ ಕರ್ನಾಟಕದ ಡಾ.ಎಚ್​.ವಿ.ವಾಸು ವಿಷಯ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net