

ಶಿವಮೊಗ್ಗ: ಎಲ್ಲ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕವಾಗಿ ನಿರ್ಧರಿಸಿ ಅದಕ್ಕೆ ತಕ್ಕಂತೆ ಮೀಸಲಾತಿ, ಸರ್ಕಾರಿ ಸೌಲಭ್ಯ, ಅವಕಾಶಗಳ ಹಂಚಿಕೆಯಾಗಬೇಕೆಂಬ ಸದುದ್ದೇಶದಿಂದ ಜಾತಿ ಗಣತಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಜ್ಯದಲ್ಲಿನ ವಿವಿಧ ಜಾತಿಗಳ ಅದರಲ್ಲೂ ಮುಖ್ಯವಾಗಿ ಹಿಂದುಳಿದ ವರ್ಗಗಳಲ್ಲಿ ಆಯಾ ಸಮುದಾಯಗಳ ಜನಸಂಖ್ಯೆ ಮತ್ತು ಅವರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ಆಧಾರದ ಮೇಲೆ ಅವರಿಗೆ ಮೀಸಲಾತಿ ಮತ್ತು ಸರ್ಕಾರಿ ಸೌಲಭ್ಯಗಳನ್ನು ಹಂಚಿಕೆ ಮಾಡಬೇಕಿದೆ ಎಂದರು.