ಫೆ.24ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸಲು ಸಮೀಕ್ಷೆ

Vijayavani-Featured-Image
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಸೊಮವಾರ (ಫೆ.24) ದಿಂದ ನಡೆಯಲ್ಲಿದ್ದು, ಎಲ್ಲ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಹಾಗೂ ಶಾಲೆಗೆ ದಾಖಲಾಗದ ಮಕ್ಕಳ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣಾ ಪ್ರಕ್ರಿಯೆಯಲ್ಲಿದೆ. ಈಗಾಗಲೇ ನೀಡಿರುವ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆ ಗುರುತಿಸುವುದು ಅವಶ್ಯಕವಾಗಿದೆ. ಈ ಸಮೀಕ್ಷೆಯನ್ನು ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖಾಯಿಂದ ಪ್ರತ್ಯೇಕ ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಸಲಾಗುತ್ತದೆ ಎಂದು ಶಿಕ್ಷಣ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಪ್ರತಿ ವಾರ್ಡ್‌ಗೆ ಗಣತಿದಾರರ ನೇಮಕ:

ಹೈಕೋರ್ಟ್ ನಿರ್ದೇಶನದಂತೆ ಈ ತಿಂಗಳ 24ರಿಂದ ಪಾಲಿಕೆಯ ಎಂಟೂ ವಲಯಗಳಲ್ಲಿ ಮನೆ ಮನೆ ಸಮೀಕ್ಷೆ ಕೈಗೆತ್ತಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಪ್ರತಿ ವಾರ್ಡ್‌ಗೆ 10 ಮಂದಿ ಗಣತಿದಾರರನ್ನು ನೇಮಿಸಿದ್ದು, ಈ ಗಣತಿದಾರರು ಪ್ರತಿ ಮನೆಗೂ ಭೇಟಿ ನೀಡಿ 6ರಿಂದ 18 ವರ್ಷದ ವಯಸ್ಸಿನವರನ್ನು ಸಮೀಕ್ಷೆ ಕೈಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net