ಹೊಸನಗರ ತಾಲೂಕು ಕಚೇರಿ ಮುಂದೆ ಧರಣಿ

18hos1p tr krishnappa
Published on

ಹೊಸನಗರ: ಭೂಮಾಪನ ಇಲಾಖೆ ಸರ್ವೆಯರ್​ಗಳು ಸರ್ವೆ ಮಾಡಲು ವಿನಾಕಾರಣ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ತಹಸೀಲ್ದಾರ್ ಕಚೇರಿ ಎದುರು ಶá-ಕ್ರವಾರ ಪ್ರತಿಭಟನೆ ನಡೆಸಿದರು.

ಭೂಮಾಪನ ಇಲಾಖೆ ಅಧಿಕಾರಿಗಳು ಲಂಚ ಕೇಳುತ್ತಾರೆ. ಲಂಚ ಕೊಡದವರ ಸರ್ವೆ ಮಾಡುವುದಿಲ್ಲ. ಇಲ್ಲವೇ ತಪ್ಪು ತಪ್ಪು ಸರ್ವೆ ಮಾಡಿ ಜನರು ನಂತರ ವ್ಯಾಜ್ಯ ಮಾಡಿಕೊಂಡು ನ್ಯಾಯಾಲಯದ ಮೆಟ್ಟಿಲು ಏರುವಂತೆ ಮಾಡಿಬಿಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲಾಖೆಯಲ್ಲಿ ಸಾಕಷ್ಟು ಸಿಬ್ಬಂದಿ ಇದ್ದರೂ ಕೆಲಸ ಮಾಡುತ್ತಿಲ್ಲ. ವಿಳಂಬಕ್ಕೆ ಕಾರಣ ಕೇಳಿದರೆ ಜ್ಯೇಷ್ಠತೆ ಆಧಾರದ ಮೇಲೆ ಸರ್ವೆ ಮಾಡಲಾಗುವುದೆಂಬ ಸಬೂಬು ಹೇಳುತ್ತಾರೆ. ಲೋಪಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದೆ. ಸರ್ವೆ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ. ಇನ್ನಾದರೂ ಸರ್ವೆ ಅಧಿಕಾರಿಗಳು ತಪ್ಪು ತಿದ್ದಿಕೊಂಡು ರೈತರ ಹಿತರಕ್ಷಣೆಗೆ ಧಾವಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net