ಒಣ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ

3-pnp 1
Suspect arrested for transporting marijuana
Published on

ಪಾಂಡವಪುರ: ಸ್ಕೂಟರ್‌ನಲ್ಲಿ ಅಕ್ರಮವಾಗಿ ಒಣ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಮಾಲು ಸಮೇತ ಸೋಮವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪಟ್ಟಣದ ವಿ.ಸಿ ಕಾಲನಿ ನಿವಾಸಿ ಆರ್.ಪ್ರಕಾಶ್ (29) ಬಂಧಿತ ಆರೋಪಿ. ತಾಲೂಕಿನ ಕ್ಯಾತನಹಳ್ಳಿ ಗ್ರಾಪಂ ವ್ಯಾಪ್ತಿಯ ಜಯಂತಿನಗರದ ಸಮೀಪ ಪಾಂಡವಪುರ-ಕೆ.ಆರ್.ಪೇಟೆ ಮುಖ್ಯ ರಸ್ತೆಯಲ್ಲಿ ಆರೋಪಿ ಸ್ಕೂಟರ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಆರೋಪಿ ಬಳಿ ಇದ್ದ 2 ಕೆ.ಜಿ 300 ಗ್ರಾಂ ಒಣ ಗಾಜಾ ಹಾಗೂ ಸ್ಕೂಟರ್ ಅನ್ನು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಬಕಾರಿ ಉಪ ಆಯುಕ್ತ ನಾಗಶಯನ ಅವರ ಮಾರ್ಗದರ್ಶನದಲ್ಲಿ ಶ್ರೀರಂಗಪಟ್ಟಣ ವಲಯದ ಅಬಕಾರಿ ನಿರೀಕ್ಷಕ ವೈ.ಜೆ. ಪ್ರಫುಲ್ಲಚಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಅಬಕಾರಿ ಪೊಲೀಸರಾದ ರಾಮು, ದಿಲೀಪ್ ವಾಹನ ಚಾಲಕರಾದ ನಾಗರಾಜು, ಸಂದೀಪ್ ಹಾಗೂ ಕ್ಯಾತನಹಳ್ಳಿ ಗ್ರಾಪಂ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net