

ಧಾರವಾಡ: ಹುಬ್ಬಳ್ಳಿ- ಧಾರವಾಡ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ರಾಜೀವ್ ಎಂ. ಅವರನ್ನು ಅಮಾನತು ಕ್ರಮ ಸರಿಯಲ್ಲ. ಸರ್ಕಾರದ ಲೋಪ ಮುಚ್ಚಿಕೊಳ್ಳಲು ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಅಖಿಲ ಭಾರತೀಯ ಮಾತಂಗ ಪರಿಷತ್ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರು ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಅವರನ್ನು ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಽಸಬೇಕು. ಈ ಹೆಣ್ಣು ಮಕ್ಕಳ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಉಭಯ ಪ್ರಕರಣಗಳಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅಮಾನತಿಗೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಡಿಸಿಪಿ ರಾಜೀವ್ ಅವರ ವಿರುದ್ಧ ಕ್ರಮ ಜರುತಿಸಿದೆ ಎಂದರು.
ದಲಿತ ಸಮಾಜದ ಗೃಹಸಚಿವ ಜಿ. ಪರಮೇಶ್ವರ ಅವರು, ದಲಿತ ಅಽಕಾರಿ ರಾಜೀವ್ ಅವರ ಅಮಾನತಿಗೆ ನಿರ್ದೇಶನ ನೀಡಿದ್ದಾರೆ. ದಲಿತನಿಂದ ದಲಿತನಿಗೆ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಇದು ಗುಬ್ಬಿ ಮೇಲೆ ಬ್ರಹ್ಮಾಸ್ತç ಬಿಟ್ಟಂತಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ. ಬಸಪ್ಪ ಡಿ., ತಿಪ್ಪಣ್ಣ ದೊಡ್ಡಮನಿ, ಕೆ.ಡಿ. ಪೂಜಾರ, ವಿರೂಪಾಕ್ಷ ಮಾಚನೂರು ಇದ್ದರು.