ಅಕ್ರಮ ಚಟುವಟಿಕೆಗಳ ಹಿಂದೆ ಖರ್ಗೆ ಕೈವಾಡ ಶಂಕೆ

19manju2
filter: 135; fileterIntensity: 0.2; filterMask: 0; hdrForward: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 33;
Published on

ಬೆಳಗಾವಿ: ರಾಜ್ಯಾದ್ಯಂತ ಅಂಗಡಿ, ಶಾಲಾ&ಕಾಲೇಜು, ಸಾರ್ವಜನಿಕ ಸ್ಥಳ ಹಾಗೂ ಪಬ್​ಗಳಲ್ಲಿ ಡ್ರಗ್ಸ್​ ಮಾಫಿಯಾ ವ್ಯಾಪಕವಾಗಿ ನಡೆಯುತ್ತಿದೆ. ಈ ಅಕ್ರಮ ಚಟುವಟಿಕೆಗಳ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ ಖರ್ಗೆ ಇರುವ ಅನುಮಾನ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಝಿರಲಿ ದೂರಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಮುಂಬೈ ಪೊಲೀಸರು ಡ್ರಗ್ಸ್​ ಸಾಗಾಣಿಕೆ ಕೇಸ್​ನಲ್ಲಿ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಹಾಗೂ ಸಚಿವ ಪ್ರಿಯಾಂಕ ರ್ಖಗೆ ಆಪ್ತ ಲಿಂಗರಾಜ ಕಣ್ಣಿ ಅವನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮಾದಕ ವಸ್ತು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​ನ ಮಲ್ಲಿನಾಥ್​ ಸೋಂತ್​ ಡ್ರಗ್ಸ್​ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಹೀಗಾಗಿ ಅಕ್ರಮ ಚಟುವಟಿಕೆಗಳ ಹಿಂದೆ ಪ್ರಿಯಾಂಕ ರ್ಖಗೆ ಕೈವಾಡವಿರುವುದು ಮೇಲ್ನೋಟಕ್ಕೆ ಅನುಮಾನ ಬಂದಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್​ನ ಭ್ರಷ್ಟಾಚಾರ ಆಡಳಿತದಿಂದಾಗಿ ಹೂಡಿಕೆ ಮಾಡಲು ಯಾವುದೇ ಉದ್ಯಮಿದಾರರು ಮುಂದೆ ಬರುತ್ತಿಲ್ಲ. ಐಟಿ&ಬಿಟಿ ಕಂಪನಿಗಳು ಕರ್ನಾಟಕ ಬಿಟ್ಟು ಬೇರೆ ರಾಜ್ಯಗಳಿಗೆ ಹೋಗುತ್ತಿವೆ. ಇದರಿಂದಾಗಿ ಪದವಿ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದರು ಹೇಳಿದರು.

ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ಬೆಂಗಳೂರಿನಲ್ಲಿ ಜೂ. 4ರಂದು ಆರ್​ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಆದರೆ, ಪ್ರಕರಣ ಕುರಿತು ತನಿಖೆ ನಡೆಸಿದ ಕುನ್ಹಾ ಸಮಿತಿ ವರದಿ ಸಾಕಷ್ಟು ಅನುಮಾನಗಳಿಂದ ಕೂಡಿದೆ. ಕಾರ್ಯಕ್ರಮ ಆಯೋಜನೆ ಮಾಡಿದವರ ಹೆಸರು ಕೈಬಿಡಲಾಗಿದೆ ಎಂದು ಆಕ್ರೋಶ ವ್ಯಕ್ಪಡಿಸಿದರು. ಬಿಜೆಪಿ ನಗರ ಟಕದ ಅಧ್ಯಕ್ಷೆ ಗೀತಾ ಸುತಾರ, ರಾಜಶೇಖರ ಡೋಣಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net