

ರಾಯಚೂರು: ನಗರದ ರೈಲು ನಿಲ್ದಾಣದ ಅಣತಿ ದೂರದಲ್ಲಿನ ರೈಲ್ವೆ ಹಳಿ ಮೇಲೆ ಬಿಎಡ್ ವಿದ್ಯಾರ್ಥಿ ಹನುಮಂತ (23) ಮಂಗಳವಾರ ಶವವಾಗಿ ಪತ್ತೆಯಾಗಿದ್ದು, ವಿದ್ಯಾರ್ಥಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗುತ್ತಿದೆ.
ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದ ಹನುಮಂತ ನಗರದ ಖಾಸಗಿ ಕಾಲೇಜಿನಲ್ಲಿ ಬಿಎಡ್ ವ್ಯಾಸಂಗ ಮಾಡುತ್ತಿದ್ದು, ವಸತಿ ನಿಲಯದಲ್ಲಿದ್ದು ಅಭ್ಯಾಸ ಮಾಡುತ್ತಿದ್ದ. ಸೋಮವಾರ ಸಂಜೆ ವಸತಿ ನಿಲಯದಿಂದ ಹೊರ ಹೋಗಿದ್ದು, ಮಂಗಳವಾರ ಶವವಾಗಿ ಪತ್ತೆಯಾಗಿದ್ದಾನೆ.
ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.