ಅನುಮಾನಸ್ಪದ ವ್ಯಕ್ತಿ ವಶಕ್ಕೆ

crime
Published on

ಹುಬ್ಬಳ್ಳಿ: ಇಲ್ಲಿಯ ಹಳೇ ಹುಬ್ಬಳ್ಳಿ ಪಿಬಿ ರಸ್ತೆಯ ಶಾದಿ ಮಹಲ್ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಬೆಂಡಿಗೇರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಿಹಾನ್ ರೋಣ ಬಂಧಿತ. ಶಾದಿ ಮಹಲ್ ಬಳಿ ಕತ್ತಲಲ್ಲಿ ಅನುಮಾನಾಸ್ಪದವಾಗಿ ನಿಂತು ತನ್ನ ಇರುವಿಕೆ ಮರೆಮಾಚಿದ್ದ. ಇದನ್ನು ಗಮನಿಸಿ ಪೊಲೀಸರು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net